January 2022

ಕಾಂಗ್ರೆಸ್ ಗೆ ಗುಡ್ ಬೈ ಹೇಳಲು ರೆಡಿಯಾದ ಎಂಎಲ್ ಸಿ ಇಬ್ರಾಹಿಂ|

ಬೆಂಗಳೂರು : ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಕಾಂಗ್ರೆಸ್ ಗೂ ನಮಗೂ ಇನ್ನೂ ಮುಗಿದ ಅಧ್ಯಾಯ ಎಂದು ಎಂ.ಎಲ್.ಸಿ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು.ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಒಂದೇ ಬಾರಿಗೆ ಎಲ್ಲ ವಿಚಾರಗಳನ್ನು ಹೇಳುವುದಿಲ್ಲ. ಕಂತು ಕಂತಾಗಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ. ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಕಾಂಗ್ರೆಸ್ ಗೂ ನಮಗೂ ಇನ್ನು ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಈ ಮೂಲಕ […]

ಕಾಂಗ್ರೆಸ್ ಗೆ ಗುಡ್ ಬೈ ಹೇಳಲು ರೆಡಿಯಾದ ಎಂಎಲ್ ಸಿ ಇಬ್ರಾಹಿಂ| Read More »

ಸಭಾಪತಿ ಹೊರಟ್ಟಿ ಸೇರಿದಂತೆ 6 ಮಂದಿ‌ ಮೇಲೆ ಎಫ್ಐಆರ್

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಆರು ಜನರ ವಿರುದ್ಧ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕರ್ನಾಟಕ ವಾಲ್ಮೀಕಿ ಮಹಾಸಭಾ ಧಾರವಾಡ ಜಿಲ್ಲಾಧ್ಯಕ್ಷ ಮೋಹನ್ ಗುಡಿಸಲಮನಿ ಅವರು ದೂರು ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ. ಮುಗದ ಗ್ರಾಮದ ಸರ್ವೋದಯ ಶಿಕ್ಷಣ ಸಂಸ್ಥೆಯನ್ನು ಬಸವರಾಜ ಹೊರಟ್ಟಿ ದುರ್ಬಳಕೆ ಮಾಡಿಕೊಂಡಿದ್ದು, ಇದನ್ನು ಪ್ರಶ್ನಿಸಿದಕ್ಕೆ ಹಲ್ಲೆ ಮಾಡಿಸಿರುವುದಾಗಿ ಆರೋಪಿಸಿ ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಬಸವರಾಜ ಹೊರಟ್ಟಿ ಸೇರಿ ಆರು ಜನರ ವಿರುದ್ಧ ದೂರು ನೀಡಲಾಗಿದೆ.

ಸಭಾಪತಿ ಹೊರಟ್ಟಿ ಸೇರಿದಂತೆ 6 ಮಂದಿ‌ ಮೇಲೆ ಎಫ್ಐಆರ್ Read More »

ಮಂಗಳೂರು: “ಪದ್ಮಶ್ರೀ ಮಹಾಲಿಂಗ ನಾಯ್ಕ”ರಿಗೆ ಅವಮಾನ| ಹೆಸರಿಲ್ಲದ ಸ್ಮರಣಿಕೆ ನೀಡಿ ‘ಖುಷಿ ಆಂಡಾ’ ಎಂದ ಉಸ್ತುವಾರಿ ಸಚಿವ ಸುನಿಲ್ ಕುಮಾರ್

ಮಂಗಳೂರು: ನೆಹರು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ 2022ನೇ ಸಾಲಿನ ಪದ್ಮಶ್ರೀ ಪುರಸ್ಕೃತರಾದ ಜಿಲ್ಲೆಯ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೆಸರಿಲ್ಲದ ಖಾಲಿ ಸ್ಮರಣಿಕೆ ನೀಡಿ ‘ಖುಷಿ ಆಂಡಾ’ ಎಂದು ಸನ್ಮಾನಿಸಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಮಹಾಲಿಂಗ ನಾಯ್ಕ ಅವರು ಕೊರೆದ ಸುರಂಗ ಮತ್ತು ತೋಟಗಳನ್ನು ಮೆಚ್ಚಿ ಕೇಂದ್ರ ಸರಕಾರ ಈ ವರ್ಷ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸುವುದಕ್ಕೆ ಮುಂದಾಗಿದೆ. ಈ ವಿಚಾರ ತಿಳಿದು ಇಂದು ಜಿಲ್ಲಾಡಳಿತ

ಮಂಗಳೂರು: “ಪದ್ಮಶ್ರೀ ಮಹಾಲಿಂಗ ನಾಯ್ಕ”ರಿಗೆ ಅವಮಾನ| ಹೆಸರಿಲ್ಲದ ಸ್ಮರಣಿಕೆ ನೀಡಿ ‘ಖುಷಿ ಆಂಡಾ’ ಎಂದ ಉಸ್ತುವಾರಿ ಸಚಿವ ಸುನಿಲ್ ಕುಮಾರ್ Read More »

ಉಡುಪಿ: ಹಿಜಾಬ್ ಪ್ರತಿಭಟನೆಯಲ್ಲಿ ತೊಡಗಿದ ವಿದ್ಯಾರ್ಥಿನಿಯರಿಗೆ ಆನ್ ಲೈನ್ ಬೋಧನೆ- ಶಾಸಕ ರಘುಪತಿ ಭಟ್

ಉಡುಪಿ: ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಹಿಂದಿನಂತೆಯೇ ವಿದ್ಯಾರ್ಥಿನಿಯರು ಹಿಜಾಬ್ ಹಾಕದೆ ಸಮವಸ್ತ್ರ ಧರಿಸಿ ತರಗತಿಗೆ ಹಾಜರಾಗಬೇಕು. ಈ ನಿಯಮವನ್ನು ಒಪ್ಪದಿದ್ದರೆ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರಿಗೆ ಆನ್‌ಲೈನ್‌ನಲ್ಲಿ ಪಾಠ ಪ್ರವಚನಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ರಘುಪತಿ ಭಟ್ ಹೇಳಿದರು. ಬುಧವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ತರಗತಿಗೆ ಹಾಜರಾಗಬೇಕು. ಇಲ್ಲವಾದರೆ, ತರಗತಿಗೆ ಪ್ರವೇಶ ಇಲ್ಲ. ಆನ್‌ಲೈನ್‌ನಲ್ಲಿ ಪಾಠ

ಉಡುಪಿ: ಹಿಜಾಬ್ ಪ್ರತಿಭಟನೆಯಲ್ಲಿ ತೊಡಗಿದ ವಿದ್ಯಾರ್ಥಿನಿಯರಿಗೆ ಆನ್ ಲೈನ್ ಬೋಧನೆ- ಶಾಸಕ ರಘುಪತಿ ಭಟ್ Read More »

ಶಾಸಕ‌ ಶರಣು ಸಲಗ ವಿರುದ್ದ ಎಫ್ಐಆರ್| ಕೋವಿಡ್ ನಿಯಮ ಮೀರಿ ಪಾದಯಾತ್ರೆ ಮಾಡಿದ್ದ ಬಿಜೆಪಿ ಶಾಸಕ

ಬೀದರ್: ಕೊರೋನಾ ಸೋಂಕಿನ ಈ ಸಂದರ್ಭದಲ್ಲಿ, ಹೆಚ್ಚು ಜನರು ಸೇರುವಂತ ಯಾವುದೇ ಕಾರ್ಯಕ್ರಮ ನಿಷಿದ್ಧವಾಗಿದ್ದರೂ ಮೂರು ದಿನಗಳ ಹಿಂದೆ ಈ ನಿಯಮ ಮೀರಿ ಬಸವಕಲ್ಯಾಣದಿಂದ ಗೋಕುಳ ಗ್ರಾಮದವರೆಗೆ ಪಾದಯಾತ್ರೆಯಲ್ಲಿ ಭಾಗಿಯಾದ ಶಾಸಕ ಶರಣು ಸಲಗ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಗೋಕುಳ ಗ್ರಾಮದವರೆಗೆ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗ ಅವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಪಾದಯಾತ್ರೆಯಲ್ಲಿ ಮಾಸ್ಕ್, ದೈಹಿಕ ಅಂತರ ಕೂಡ ಕಾಪಾಡಿರಲಿಲ್ಲ. ಈ ಕಾರಣದಿಂದಾಗಿ ಕಾಂಗ್ರೆಸ್

ಶಾಸಕ‌ ಶರಣು ಸಲಗ ವಿರುದ್ದ ಎಫ್ಐಆರ್| ಕೋವಿಡ್ ನಿಯಮ ಮೀರಿ ಪಾದಯಾತ್ರೆ ಮಾಡಿದ್ದ ಬಿಜೆಪಿ ಶಾಸಕ Read More »

ಪ್ರ.ದ.ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ನಾಳೆ(ಜ.27)ಯಿಂದ ಆನ್ ಲೈನ್ ಕೌನ್ಸಲಿಂಗ್

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಜನವರಿ 27 ರಿಂದ ಕೌನ್ಸೆಲಿಂಗ್ ನಡೆಯಲಿದೆ. ಜನವರಿ 27 ರಿಂದ 30 ರವರೆಗೆ ಆನ್ ಲೈನ್ ಕೌನ್ಸೆಲಿಂಗ್ ನಡೆಯಲಿದೆ. ಈ ಕುರಿತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. 10,636 ಅತಿಥಿ ಉಪನ್ಯಾಸಕರ ನೇಮಕಾತಿ ನಡೆಯಲಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಜೇಷ್ಠತೆ ಆಧಾರದಲ್ಲಿ ತಮಗೆ ಬೇಕಾದ ಕಾಲೇಜು ಆಯ್ಕೆ ಮಾಡಿಕೊಳ್ಳಬಹುದು. ನೇಮಕವಾದ ಬಳಿಕ ಎರಡು ದಿನಗಳಲ್ಲಿ ವರದಿ ಮಾಡಿಕೊಳ್ಳಬೇಕಿದೆ.

ಪ್ರ.ದ.ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ನಾಳೆ(ಜ.27)ಯಿಂದ ಆನ್ ಲೈನ್ ಕೌನ್ಸಲಿಂಗ್ Read More »

ಆಂಧ್ರಪ್ರದೇಶದಲ್ಲಿ 13 ಹೊಸ ಜಿಲ್ಲೆ ರಚನೆ

ಅಮರಾವತಿ: ಆಂಧ್ರಪ್ರದೇಶದಲ್ಲಿ ಪ್ರಮುಖ ಆಡಳಿತ ಸುಧಾರಣೆ ತರಲು ಜಗನ್ ಮೋಹನ್ ರೆಡ್ಡಿ ಸರ್ಕಾರ ಇಂದು ಬೆಳಿಗ್ಗೆ 13 ಹೊಸ ಜಿಲ್ಲೆಗಳ ರಚನೆಗೆ ಅಧಿಸೂಚನೆಯನ್ನು ಹೊರಡಿಸಿದೆ. ಆಡಳಿತವನ್ನು ಸರಾಗಗೊಳಿಸಲು ಮತ್ತು ಅಧಿಕಾರಿಗಳ ಪ್ರವೇಶವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಪ್ರಸ್ತುತ ಇರುವ 13 ಜಿಲ್ಲೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸಿದೆ. 25 ಲೋಕಸಭಾ ಕ್ಷೇತ್ರಗಳನ್ನು ಪ್ರತಿಯೊಂದನ್ನು ಜಿಲ್ಲೆಯಾಗಿ ಪುನಾರಚಿಸಲಾಗಿದೆ. ಅರಕು ಕ್ಷೇತ್ರವನ್ನು ನಾಲ್ಕು ಕ್ಷೇತ್ರಗಳಾಗಿ ರಚಿಸಲಾಗಿದೆ. ಆಂಧ್ರಪ್ರದೇಶ ಜಿಲ್ಲೆಗಳ ರಚನೆ ಕಾಯ್ದೆಯ ಸೆಕ್ಷನ್ 3(5) ಅಡಿ ಜಿಲ್ಲೆಗಳನ್ನು ರಚನೆ ಮಾಡಲಾಗಿದ್ದು,

ಆಂಧ್ರಪ್ರದೇಶದಲ್ಲಿ 13 ಹೊಸ ಜಿಲ್ಲೆ ರಚನೆ Read More »

ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ನೇಣಿಗೆ ಶರಣಾಗಿರುವ ಘಟನೆ ಬಸವೇಶ್ವರನಗರ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ನಡೆದಿದೆ. ಮೆಕಾನಿಕ್‌ ಕೆಲಸ ಮಾಡುತ್ತಿದ್ದ ಚಾಂದ್‌ಪಾಷಾ (31) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕೌಟುಂಬಿಕ ಕಲಹ ದಿಂದ ಮೊದಲ ಪತ್ನಿಯಿಂದ ದೂರವಾಗಿದ್ದರು. ಆ ಹಿನ್ನೆಲೆ ಚಾಂದ್‌ ಪಾಷಾ ಕಳೆದ 4 ತಿಂಗಳ ಹಿಂದಷ್ಟೇ ಉಸ್ಮಾ (26) ಎಂಬಾಕೆಯನ್ನು ಮದುವೆಯಾಗಿದ್ದ. ಚಾಂದ್‌ ಪಾಷಾ ಪತ್ನಿ ಉಸ್ಮಾಗೆ ಐಷಾರಾಮಿ ಜೀವನದ ಗೀಳಿತ್ತು. ಆ ಹಿನ್ನೆಲೆ ಯಲ್ಲಿಯೇ ದುಬಾರಿ ಬಟ್ಟೆ ಧರಿಸುವುದು. ಚಿನ್ನಾಭರಣ

ಬೆಂಗಳೂರು: ಪತ್ನಿಯ ಐಶಾರಾಮಿ ಜೀವನಕ್ಕೆ ಬೇಸತ್ತು ಪತಿ ಆತ್ಮಹತ್ಯೆ Read More »

ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್| ಪುನಿತ್ ಅಭಿನಯದ ಜೇಮ್ಸ್ ಚಿತ್ರದ ಪೋಸ್ಟರ್ ಬಿಡುಗಡೆ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಚಿತ್ರದ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಪುನೀತ್ ರಾಜ್‍ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿರುವ ಚಿತ್ರ ಇದಾಗಿದ್ದು, ಈ ಚಿತ್ರದ ಪೋಸ್ಟರ್ ಅನ್ನು ಗಣರಾಜ್ಯೋತ್ಸವದಂದು ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ಅನೌನ್ಸ್ ಮಾಡಿತ್ತು. ಅದರಂತೆ ಇಂದು ಜೇಮ್ಸ್ ಸಿನಿಮಾದ ಪೋಸ್ಟರ್ ಬಿಡುಗಡೆಗೊಂಡಿದ್ದು, ಅಶ್ವಿನಿ ಪುನೀತ್ ರಾಜ್‍ಕುಮಾರ್, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಪುನೀತ್ ಗನ್ ಹಿಡಿದು ಖಡಕ್

ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್| ಪುನಿತ್ ಅಭಿನಯದ ಜೇಮ್ಸ್ ಚಿತ್ರದ ಪೋಸ್ಟರ್ ಬಿಡುಗಡೆ Read More »

ಅಸಹಜ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಬಾಲಕನ ಇರಿದು ಕೊಂದ ಯುವಕ

ರಾಯ್‍ಪುರ: ಅಸಹಜ ಲೈಂಗಿಕ ಸಂಭೋಗಕ್ಕೆ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕನನ್ನು ಯುವಕನೊರ್ವ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಛತ್ತೀಸ್‍ಗಢದ ಬೆಮೆತಾರಾ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪಂಕಜ್ ವಿಶ್ವಕರ್ಮ(20) ಎಂದು ಗುರುತಿಸಲಾಗಿದೆ. ಬಿಜಭಟ ಮುರುಮ್ ಗಣಿ ಸಮೀಪದ ಪ್ರತ್ಯೇಕ ಸ್ಥಳಕ್ಕೆ ಸೋಮವಾರ ಬಾಲಕನನ್ನು ಕರೆದೊಯ್ದು ಹರಿತವಾದ ಆಯುಧದಿಂದ ಕೊಂದಿದ್ದಾನೆ. ಕೃತ್ಯ ವೆಸಗಿದ ಕೂಡಲೇ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಬೆಮೆತಾರಾ ಪೊಲೀಸ್ ಠಾಣೆಯ ಅಧಿಕಾರಿ ಪ್ರೇಮ್ ಪ್ರಕಾಶ್ ಅವಧಿಯಾ ತಿಳಿಸಿದ್ದಾರೆ. ಬಾಲಕ ಕಾಣೆಯಾಗಿರುವುದಾಗಿ ಬಾಲಕನ ಪೋಷಕರು ದೂರು ದಾಖಲಿಸಿದ

ಅಸಹಜ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಬಾಲಕನ ಇರಿದು ಕೊಂದ ಯುವಕ Read More »