ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ| ಅಟೋ ಚಾಲಕನ ಬಂಧನ

Ad Widget ... ..

ಸಮಗ್ರ ನ್ಯೂಸ್ ಡೆಸ್ಕ್: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ‌ ಆರೋಪದಲ್ಲಿ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಬಂಧಿತನನ್ನು ಕಂಬಳಬೆಟ್ಟು ನಿವಾಸಿ ಅಬ್ದುಲ್‌ ನಾಸಿರ್‌ ಎಂದು ಗುರುತಿಸಲಾಗಿದೆ.

Ad Widget

ಈತ ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದು, ಆಗಾಗ್ಗೆ ಆಕೆಯ ಮನೆಗೂ ಬರುತ್ತಿದ್ದ. ಈ ಕುರಿತು ಆತನಿಗೆ ಎಚ್ಚರಿಕೆಯನ್ನು ನೀಡಲಾಗಿತ್ತು ಎನ್ನಲಾಗಿದೆ.

ಈ ವಿಚಾರದಲ್ಲಿ ಮನೆಯವರು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ ಎಂದು ಬಾಲಕಿಯ ತಾಯಿ ವಿಟ್ಲ ಪೊಲೀಸರಿಗೆ ನೀಡಿದ‌ ದೂರಿನಲ್ಲಿ ವಿವರಿಸಿದ್ದಾರೆ. ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Comment

Your email address will not be published. Required fields are marked *