ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ

Ad Widget ... ..

ಸಮಗ್ರ ನ್ಯೂಸ್ ಡೆಸ್ಕ್: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

Ad Widget

ಈ ಕುರಿತು ಟ್ವೀಟ್ ಮಾಡಿರುವ ಸಚಿವರು 2021 -22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. pue.kar.nic.in ವೆಬ್ಸೈಟ್ ನಲ್ಲಿ ಪ್ರಶ್ನೆಪತ್ರಿಕೆಗಳು ಲಭ್ಯವಿವೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಈಗಾಗಲೇ ವೇಳಾಪಟ್ಟಿಯನ್ನೂ ಪ್ರಕಟಿಸಲಾಗಿದೆ.

Leave a Comment

Your email address will not be published. Required fields are marked *