ಸಮಗ್ರ ನ್ಯೂಸ್ ಡೆಸ್ಕ್: ವಿಟ್ಲದ ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸೋಂಕಲ್ ಅಗರ್ತಿಮೂಲೆ ಸಮೀಪದ ಉಮರುಲ್ ಭಾಷಿತ್ ಎಂಬಾತನ ಜೊತೆ ಜ.6 ರಂದು ನಡೆದಿತ್ತು. ಅದೇ ದಿನ ರಾತ್ರಿ ಸಾಲೆತ್ತೂರಿನ ಮದುಮಗಳ ಮನೆಯಲ್ಲಿ ನಡೆದ ಔತಣ ಕೂಟದಲ್ಲಿ ಮದುಮಗ ಭಾಷಿತ್ ಕೊರಗಜ್ಜನ ಮಾದರಿಯ ವೇಷ ಧರಿಸಿ ಕುಣಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಕಡಂಬು ನಿವಾಸಿ ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಚೇತನ ರವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವರ ಉಮರುಲ್ ಭಾಷಿತ್ ಮತ್ತು ಇತರ ಹಲವರ ವಿರುದ್ಧ ಕಲಂ 153ಎ,295 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರು ತನಿಖೆಗಾಗಿ ಠಾಣಾ ಎಸ್.ಐ.ಗಳಾದ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಸಂಜೀವ ಪುರುಷರವರ ನೇತೃತ್ವದಲ್ಲಿ ಎರಡು ವಿಶೇಷ ತಂಡವನ್ನು ರಚಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದರು. ಅದರೆ ಕೊರಗಜ್ಜನ ವೇಷ ಧರಿಸಿದ ಆರೋಪಿ ಭಾಷಿತ್ ತಲೆಮರೆಸಿಕೊಂಡಿದ್ದನು. ಈತನ ಪತ್ತೆ ಬಗ್ಗೆ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಿರುವ ನಡೆಸುತ್ತಿದ್ದಾರೆ.