Ad Widget .

ಸೆಕ್ಸ್ ಸಿಡಿ ಪ್ರಕರಣ| ಮಾಜಿ‌ ಸಚಿವ ಜಾರಕಿಹೋಳಿ ನಿರಾಳ

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅಶ್ಲೀಲ ಸಿ.ಡಿ. ಬಹಿರಂಗ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ)ವು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ಕ್ಲೀನ್‌ಚಿಟ್‌ ನೀಡಿದೆ.

Ad Widget . Ad Widget .

ಅಶ್ಲೀಲ ಸಿಡಿ ಪ್ರಕರಣದ ತನಿಖೆ ಮುಕ್ತಾಯಗೊಳಿಸಿರುವ ಎಸ್‌ಐಟಿ ಶುಕ್ರವಾರ ನಗರದ ಮೊದಲನೇ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಅಂತಿಮ ವರದಿ ಸಲ್ಲಿಸಿದೆ.

ತಂಡದ ತನಿಖಾಧಿಕಾರಿ ಎಂ.ಸಿ. ಕವಿತಾ ಅವರು ಎಸ್‌ಐಟಿ ಸರಕಾರಿ ವಿಶೇಷ ಅಭಿಯೋಜಕ ಪಿ.ಪ್ರಸನ್ನಕುಮಾರ್‌ ಅವರ ಮೂಲಕ ಕೋರ್ಟ್‌ಗೆ ಸುಮಾರು 300 ಪುಟಗಳ ಅಂತಿಮ ವರದಿ ಸಲ್ಲಿಸಿದ್ದು, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಮಾಜಿ ಸಚಿವರ ವಿರುದ್ಧದ ಆರೋಪ ಸಾಬೀತಾಗಿಲ್ಲ ಎಂದು ಉಲ್ಲೇಖೀಸಿದೆ ಎಂದು ಮೂಲಗಳು ತಿಳಿಸಿವೆ.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿ ರಮೇಶ್‌ ಜಾರಕಿಹೊಳಿ ಹಾಗೂ ಸಂತ್ರಸ್ತೆಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿತ್ತು. ಅಲ್ಲದೆ, ಆರೋಪಕ್ಕೆ ಸಂಬಂಧಿಸಿ ಸಂತ್ರಸ್ತೆಯಿಂದ ಸಾಕ್ಷÂ ಪಡೆಯಲಾಗಿತ್ತು. ಆದರೆ, ಉದ್ದೇಶಪೂರ್ವಕವಾಗಿಯೇ ಸಚಿವರ ವಿರುದ್ಧ ಕೆಲ ಸಾಕ್ಷ್ಯಗಳನ್ನು ಸೃಷ್ಟಿಸಲಾಗಿದೆ ಎಂದು ಹೇಳಲಾಗಿದೆ. ಜತೆಗೆ ವೈರಲ್‌ ಆಗಿರುವ ಸಿಡಿಯಲ್ಲಿರುವ ದೃಶ್ಯಗಳಲ್ಲಿ ಸಂತ್ರಸ್ತೆ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯದಂತಹ ಕೃತ್ಯ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ತನಿಖಾ ತಂಡ ಅಭಿಪ್ರಾಯಕ್ಕೆ ಬಂದಿದೆ .

Leave a Comment

Your email address will not be published. Required fields are marked *