Ad Widget .

ಹಿಜಾಬ್ V/s ಕೇಸರಿ ಫೈಟ್ ಗೆ ಸರ್ಕಾರದಿಂದ ಬ್ರೇಕ್ ಯತ್ನ| ಸಮವಸ್ತ್ರ ಸಂಹಿತೆ ಜಾರಿಗೊಳಿಸಿ ಆದೇಶ

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದ ವಿವಿಧ ಕಾಲೇಜುಗಳಲ್ಲಿ ಹಿಜಾಬ್- ಕೇಸರಿ ಶಾಲಿನ ವಿವಾದ ಭುಗಿಲೆದ್ದ ಬೆನ್ನಲ್ಲೇ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

Ad Widget . Ad Widget .

ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಬೇಕಾದುದು ಕಡ್ಡಾಯವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು. ಒಂದುವೇಳೆ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದೇ ಇದ್ದರೆ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಿರುವ ಉಡುಪು ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

Ad Widget . Ad Widget .

ದೇಶಾದ್ಯಂತ ಕರ್ನಾಟಕದ ಹಿಜಾಬ್ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರಸಂಹಿತೆ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್​. ಪದ್ಮಿನಿ ಇಂದು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ ಎಲ್ಲ ಶಾಲಾ- ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕದಲ್ಲಿ ಸರ್ಕಾರ ಏಕರೂಪದ ಸಮವಸ್ತ್ರವನ್ನು ಜಾರಿಗೊಳಿಸಿದೆ. ಶಾಲಾ-ಕಾಲೇಜಿನಲ್ಲಿ ಏಕರೂಪದ ಸಮವಸ್ತ್ರ ಫಿಕ್ಸ್​ ಮಾಡಲಾಗಿದೆ. ಪಿಯು ಕಾಲೇಜುಗಳಲ್ಲಿ ನಿಗದಿಪಡಿಸಿದ ಸಮವಸ್ತ್ರವೇ ಅಂತಿಮವಾಗಿದೆ. ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿರುವ ಯೂನಿಫಾರ್ಮ್​ ಧರಿಸುವುದು ಕಡ್ಡಾಯವಾಗಿದೆ. ಕಾಲೇಜು ಸಮವಸ್ತ್ರ ನಿಗದಿಪಡಿಸದಿದ್ದರೆ ಸಮರ್ಪಕ ಉಡುಪು ಧರಿಸಬೇಕು. ಸಮಾನತೆ, ಐಕ್ಯತೆ ಜೊತೆ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಉಡುಪು ಧರಿಸುವುದು ಕಡ್ಡಾಯವಾಗಿದೆ.

Leave a Comment

Your email address will not be published. Required fields are marked *