ಸಮಗ್ರ ನ್ಯೂಸ್ ಡೆಸ್ಕ್: 2022-23ನೇ ಸಾಲಿನ 6ನೇತರಗತಿ ಪ್ರವೇಶಕ್ಕೆ ನಗರದ ಕಮ್ಮಾಜೆ, ನೆಲ್ಲಿತೀರ್ಥ, ಗುರುಪುರ ಮೂಡಬಿದ್ರೆಯ ಕಲ್ಲಬೆಟ್ಟು, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ, ಡಾ. ಬಿ. ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 6 ರಿಂದ 10ನೇತರಗತಿಯ ವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾಥಿರ್üಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಇದೇ ಮಾರ್ಚ್ 20 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಆಯಾ ತಾಲೂಕು ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಆಭ್ಯರ್ಥಿಯು ತನ್ನ ಎಸ್‍ಎಟಿಎಸ್ ಸಂಖ್ಯೆ, ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. ಅರ್ಜಿಗಳನ್ನು ಆನ್‍ಲೈನ್ ಮೂಲಕ ಫೆ.22 ರೊಳಗೆ ಸಲ್ಲಿಸಬಹುದು
ಹೆಚ್ಚಿನ ಮಾಹಿತಿಗೆ ವಸತಿ ಶಾಲಾ ಪ್ರಾಂಶುಪಾಲರ ದೂ.ಸಂಖ್ಯೆ: 0824-2451237 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.