ಸಮಗ್ರ ನ್ಯೂಸ್ ಡೆಸ್ಕ್: ಶಾಲು, ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಮದ್ಯಂತರ ಆದೇಶ ನೀಡಿದೆ.
ಇಂದು ಹಿಜಾಬ್ ಕುರಿತ ಅರ್ಜಿ ವಿಚಾರಣೆ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ತ್ರಿ ಸದಸ್ಯ ಪೀಠ ಈ ಮಧ್ಯಂತರ ಆದೇಶ ನೀಡಿ, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು.
ಮುಂದಿನ ಆದೇಶ ಬರುವವರೆಗೂ ಕಾಲೇಜಿಗೆ ಯಾರೂ ಸಹ ಹಿಜಬ್ ಮತ್ತು ಕೇಸರಿ ಶಾಲನ್ನು ಧರಿಸಿ ಹೋಗುವಂತಿಲ್ಲ. ಕಾಲೇಜು ನಡೆಯಲೇಬೇಕು. ಹೀಗಾಗಿ ಮಧ್ಯಂತರ ಆದೇಶ ನೀಡಿದ್ದೇವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಸಾಂವಿಧಾನತ್ಮಕ ಪ್ರಶ್ನೆಗಳು ಎದ್ದಿರುವ ಕಾರಣ ವಿಚಾರಣೆಯನ್ನು ಗಂಭೀರವಾಗಿ ನಡೆಸಲಾಗುವುದು ಎಂದು ಹೇಳಿರುವ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.