ಸಮಗ್ರ ನ್ಯೂಸ್ ಡೆಸ್ಕ್: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅನುಮತಿ ನೀಡುವಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನಿನ್ನೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿ ಸದಸ್ಯ ಪೀಠವು, ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತುಗಳ ಉಡುಪು ಧರಿಸಿ ಶಾಲೆಗಳಿಗೆ ತೆರಳದಂತೆ ಮಧ್ಯಂತರ ಆದೇಶ ಹೊರಡಿಸಿತ್ತು.
ಇದೀಗ ಈ ಆದೇಶವನ್ನು ಪ್ರಶ್ನಿಸಿ, ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಮೂಲಕ ಈಗ ಕರ್ನಾಟಕದ ಹಿಜಾಬ್, ಕೇಸರಿ ಶಾಲು ಸಂಘರ್ಷ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದಂತೆ ಆಗಿದೆ.
ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಪ್ರಕರಣ ಬಾಕಿ ಇರುವ ಸಂದರ್ಭದಲ್ಲಿ ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಉಡುಪನ್ನು ಧರಿಸಬೇಡಿ ಎಂದು ಕರ್ನಾಟಕ ಹೈಕೋರ್ಟ್ ನಿನ್ನೆ ಹೊರಡಿಸಿದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ವಿಶೇಷ ರಜೆ ಅರ್ಜಿ ಸಲ್ಲಿಸಲಾಗಿದೆ.
ಈ ಸಂಬಂಧ ಆದೇಶ ಹೊರಡಿಸುವುದಾಗಿ ಕರ್ನಾಟಕ ಹೈಕೋರ್ಟ್ ನ ಪೂರ್ಣ ಪೀಠ ಗುರುವಾರ ಅಭಿಪ್ರಾಯಪಟ್ಟಿತ್ತು