Ad Widget .

‘ ಹಿಜಾಬ್ ಕುರಿತು ಮಧ್ಯಪ್ರವೇಶ ಮಾಡಲ್ಲ’ – ಸುಪ್ರೀಂ ಮೆಟ್ಟಿಲೇರಿದ ಅರ್ಜಿದಾರರಿಗೆ ಖಡಕ್ ಉತ್ತರ ನೀಡಿದ ಕೋರ್ಟ್| ಅರ್ಜಿದಾರರಿಗೆ ಹಿನ್ನಡೆ

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್ : ಹಿಜಾಬ್ ವಿವಾದದಲ್ಲಿ ಸದ್ಯಕ್ಕೆ ತನ್ನ ಮಧ್ಯಪ್ರವೇಶ ಇಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಇಂದು ಸ್ಪಷ್ಟಪಡಿಸಿದೆ. ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಅನುಮತಿ ನೀಡುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಿನ್ನೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿ ಸದಸ್ಯ ಪೀಠವು, ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತುಗಳ ಉಡುಪು ಧರಿಸಿ ಶಾಲೆಗಳಿಗೆ ತೆರಳದಂತೆ ಮಧ್ಯಂತರ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಪ್ರಶ್ನಿಸಿ, ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠವು ನಿರಾಕರಿಸಿದೆ.

Ad Widget . Ad Widget .

ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಪ್ರಕರಣ ಬಾಕಿ ಇರುವ ಸಂದರ್ಭದಲ್ಲಿ ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಉಡುಪನ್ನು ಧರಿಸಬೇಡಿ ಎಂದು ಕರ್ನಾಟಕ ಹೈಕೋರ್ಟ್ ನಿನ್ನೆ ಹೊರಡಿಸಿದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ವಕೀಲ ಕಾಮತ್ ಮೂಲಕ ವಿಶೇಷ ಅರ್ಜಿ ಸಲ್ಲಿಸಲಾಗಿತ್ತು.

ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನ ಪೂರ್ಣ ಪೀಠ ನಿನ್ನೆ ತನ್ನ ಆದೇಶ ಪ್ರಕಟಿಸಿತ್ತು. ಈ ಬೆನ್ನಲ್ಲೇ ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆಯೂ ಅರ್ಜಿದಾರರ ಪರ ವಕೀಲರು ಸುಪ್ರೀಂ ಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿತ್ತು. ಆದರೆ, ಸುಪ್ರೀಂ ಕೋರ್ಟ್ ನ್ಯಾಯ ಪೀಠವು ತುರ್ತು ಅರ್ಜಿಯ ವಿಚಾರಣೆಗೆ ನಕಾರ ವ್ಯಕ್ತಪಡಿಸಿದೆ.
ಮೊದಲು ಕರ್ನಾಟಕ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದು ಆದೇಶ ಹೊರಬೀಳಲಿ.‌ ಒಂದು ವೇಳೆ ಅಗತ್ಯ ಬಿದ್ದರೆ ಮಾತ್ರ ತಾನು ಮಧ್ಯ ಪ್ರವೇಶ ಮಾಡುವುದಾಗಿ‌ ಮುಖ್ಯ ನ್ಯಾಯಾಧೀಶರು ಹೇಳಿಕೆ ನೀಡಿದ್ದಾರೆ.‌ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಪರೀಕ್ಷೆಗಳ ಮೇಲೆ ಪರಿಣಾಮ ಬಿದ್ದರೆ ಸುಪ್ರೀಂ ಕೋರ್ಟ್ ಕೂಡಲೇ ವಿಚಾರಣೆ ನಡೆಸಲಿದೆ ಎಂದು ಅವರು ಹೇಳಿದರು.‌ ಇದೀಗ ಹಿಜಾಬ್ ವಿಚಾರವಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ಹಿಜಾಬ್ ಪರ ಹೋರಾಟಗಾರರಿಗೆ ಇದು ಭಾರೀ‌ ಹಿನ್ನಡೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

Leave a Comment

Your email address will not be published. Required fields are marked *