Ad Widget .

ಪರಿಷತ್ ಸಭಾ ನಾಯಕರಾಗಿ ಕೋಟ‌ ನಾಮನಿರ್ದೇಶನ

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ವಿಧಾನ ಪರಿಷತ್​ ಸಭಾ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ನಾಮ ನಿರ್ದೇಶನ ಮಾಡಲಾಗಿದೆ.

Ad Widget . Ad Widget .

ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಹಿಂದೆಯೂ ಸಭಾನಾಯಕನಾಗಿ ನೇಮಕಗೊಂಡಿದ್ದರು. ಈ ಬಾರಿಯೂ ಸಭಾ ನಾಯಕರಾಗಿ ನಾಮನಿರ್ದೇಶನ ಮಾಡಿ ಸಭಾಪತಿಗೆ ಪತ್ರ ಬರೆಯಲಾಗಿದೆ.

ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದಾರೆ.

ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಪರಿಷತ್​ನ ಸಭಾ ನಾಯಕರನ್ನಾಗಿ ನಾಮ‌ನಿರ್ದೇಶನ‌ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಹಿಂದೆ ಯಡಿಯೂರಪ್ಪ ಸರ್ಕಾರದಲ್ಲೂ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್​​ನ ಸಭಾನಾಯಕರಾಗಿದ್ದರು.

Leave a Comment

Your email address will not be published. Required fields are marked *