ಸಮಗ್ರ ನ್ಯೂಸ್ ಡೆಸ್ಕ್ : ಕೋರ್ಟ್ ಆದೇಶದಂತೆ ಫೆಬ್ರವರಿ 14ರಿಂದ 10ನೇ ತರಗತಿವರೆಗೆ ಶಾಲೆ ಮತ್ತೆ ಆರಂಭ ಮಾಡುತ್ತಿದ್ದೇವೆ. ದಯವಿಟ್ಟು ಮಕ್ಕಳನ್ನ ಸಮವಸ್ತ್ರದಲ್ಲಿಯೇ ಕಳುಹಿಸಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ‘ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಶಾಲೆಗೆ ಬರಬೇಕು. ಇನ್ನು ಇಂದು ಮತ್ತು ಸೋಮವಾರ ಮತ್ತೊಂದು ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಕಾಲೇಜು ಪುನಾರಂಭ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.
ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್-ಕೇಸರಿ ಶಾಲು ವಿವಾದದ ಕುರಿತಾಗಿ ಹೈಕೋರ್ಟ್ ತ್ರಿ ಸದಸ್ಯ ಪೀಠ ನಿನ್ನೆ ಮಧ್ಯಂತರ ಆದೇಶ ಪ್ರಕಟಿಸಿದ್ದು, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನು ಬಳಸಬಾರದು. ಅಂತೆಯೇ ರಾಜ್ಯದಲ್ಲಿ ಶೀಘ್ರವೇ ಕಾಲಾ-ಕಾಲೇಜು ಆರಂಭಿಸಬೇಕು ಎಂದು ಸೂಚಿಸಿದೆ.