ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಫೆಬ್ರವರಿ 16ವರೆಗೂ ಕಾಲೇಜುಗಳಿಗೆ ರಜೆಯನ್ನ ವಿಸ್ತರಣೆ ಮಾಡಲಾಗಿದೆ.

ಬುಧವಾರದವರೆಗೆ ಕಾಲೇಜುಗಳು ರಜೆ ಘೋಷಣೆ ಮಾಡಲಾಗುತ್ತಿದ್ದು, ಮುಂದಿನ ಪರಿಸ್ಥಿತಿ ನೋಡಿಕೊಂಡು ಮತ್ತೆ ನಿರ್ಧಾರ ಮಾಡಲಾಗುವುದು. ಅದರಂತೆ ಪಿಯುಸಿ, ಡಿಗ್ರಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದೆ.