Ad Widget .

ತಾ.ಪಂ, ಜಿ.ಪಂ ಚುನಾವಣೆ‌ ಇನ್ನೊಂದು ವರ್ಷ ಮುಂದೂಡುವ ಸಾಧ್ಯತೆ – ಸಚಿವ ಕೆ.ಎಸ್. ಈಶ್ವರಪ್ಪ

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಕೋವಿಡ್ ಕಾರಣದಿಂದಾಗಿ ವಿವಿಧ ಚುನಾವಣೆಗಳನ್ನು ಮುಂದೂಡಿಕೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗಳು ಇನ್ನೊಂದು ವರ್ಷ ನಡೆಯೋದು ಅನುಮಾನ ಎನ್ನಲಾಗಿದೆ.

Ad Widget . Ad Widget .

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್ ಇತ್ತೀಚಿಗೆ ಆದೇಶವೊಂದನ್ನು ನೀಡಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ನಡೆಯುವುದು ಅನುಮಾನ. ಬಿಜೆಪಿ ಸರ್ಕಾರದ ಅವಧಿಯಲ್ಲೇ ನಡೆಯುತ್ತೋ, ಇಲ್ಲವೇ ಗೊತ್ತಿಲ್ಲ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡಿರುವಂತ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಯೋದು ಅನುಮಾನ.

Leave a Comment

Your email address will not be published. Required fields are marked *