Ad Widget .

ಎಸ್ಎಸ್ಎಲ್ ಸಿ, ಪಿಯುಸಿ ಪೂರ್ಣಗೊಂಡ ವಿದ್ಯಾರ್ಥಿಗಳ ಗಮನಕ್ಕೆ| ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್ : ಭಾರತ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಕೆಳ ವಿಭಾಗದ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಅಂಚೆ ಸಹಾಯಕ/ ವಿಂಗಡಣೆ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಸಂಯೋಜಿತ ಉನ್ನತ ಮಾಧ್ಯಮಿಕ ಹಂತದ (10+2) ಪರೀಕ್ಷೆ-2021 ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

Ad Widget . Ad Widget .

ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ https://ssc.nic.in ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನವಾಗಿದೆ. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ವಿಜ್ಞಾನ ವಿಷಯದಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ್ದು, ಗಣಿತ ವಿಷಯ ಕಡ್ಡಾಯವಾಗಿ ಅಭ್ಯಸಿಸಿರಬೇಕು. ಟೈಪಿಂಗ್ 15 ನಿಮಿಷದಲ್ಲಿ 8 ಸಾವಿರ ಕೀಗಳ ಟೈಪಿಂಗ್ ಸಾಮಥ್ರ್ಯ ಹೊಂದಿರಬೇಕು.

ಉಳಿದ ಎಲ್ಲಾ ಹುದ್ದೆಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು. ಟೈಪಿಂಗ್ 15 ನಿಮಿಷದಲ್ಲಿ 15 ಸಾವಿರ ಕೀಗಳ ಟೈಪಿಂಗ್ ಸಾಮಥ್ರ್ಯ ಹೊಂದಿರಬೇಕು.

ಅಭ್ಯರ್ಥಿಯು 01-01-2022 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ರಿಂದ 27 ವರ್ಷಗಳು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ, ಪಿಡಬ್ಲ್ಯುಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ. ಗೆ ಸೇರಿದ ಅಭ್ಯರ್ಥಿಗಳಿಗೆ 100 ರೂ., ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪಿಡಬ್ಲ್ಯುಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಅರ್ಜಿ ಶುಲ್ಕವನ್ನು ಮಾರ್ಚ್ 7 ರ ಒಳಗೆ ಆನ್‍ಲೈನ್, ನೆಟ್ ಬ್ಯಾಂಕಿಂಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಲನ್ ಮುಖಾಂತರ ಶುಲ್ಕ ಪಾವತಿ ಮಾಡಬಹುದು. ಹೆಚ್ಚಿನ ಮಾಹಿತಿಗೆ https://ssc.nic.in ನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *