ಸಮಗ್ರ ನ್ಯೂಸ್ ಡೆಸ್ಕ್: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ವಕೀಲ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೋರ್ಟ್ ಆವರಣದಲ್ಲಿ ದುರ್ವರ್ತನೆ ತೋರಿರುವುದಾಗಿ ಆರೋಪಿಸಿ ಶನಿವಾರ ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗವು ಪೊಲೀಸ್ ಕಮೀಷನರ್ ಕಮಲ್ ಪಂತ್ಗೆ ದೂರು ನೀಡಿದ್ದರು.
ವಕೀಲ ಜಗದೀಶ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ಮಾಡುವುದಕ್ಕೆ ಒಂದನೇ ಎಸಿಎಂಎಂ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ತನಿಖೆ ಮಾಡುವಂತೆ ಕೇಂದ್ರ ವಿಭಾಗದ ಪೊಲೀಸರಿಗೆ ಕಮಲ್ ಪಂತ್ ಸೂಚಿಸಿದ್ದರು. ವಕೀಲ ಜಗದೀಶ್ ಅವರನ್ನು ಬಂಧಿಸಿರುವ ಕೇಂದ್ರ ವಿಭಾಗದ ಪೊಲೀಸರು ಕೋರಮಂಗಲ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ವಕೀಲರ ಸಂಘ ನೀಡಿದ್ದ ದೂರಿನಡಿ ಪ್ರಕರಣ ಪೊಲೀಸರು ದಾಖಲಿಸಿಕೊಂಡಿದ್ದು, ಭಾನುವಾರ ಬೆಳಗಿನ ಜಾವ ಕೊಡಿಗೇಹಳ್ಳಿಯಲ್ಲಿರುವ ಮನೆಯಲ್ಲಿ ಜಗದೀಶ್ ಅವರನ್ನು ಬಂಧಿಸಲಾಗಿದೆ.