ಸಮಗ್ರ ನ್ಯೂಸ್ ಡೆಸ್ಕ್ : ಜಿಲ್ಲೆಯ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಕೆಲ ದಿನಗಳಿಂದ ದ.ಕ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.
ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜು ಆವರಣದಲ್ಲಿ ಜನ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಆವರಣದಿಂದ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ144 ಸೆಕ್ಷನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ನಿಷೇದಾಜ್ಞೆ ಭಾನುವಾರ ರಾತ್ರಿ 10 ಘಂಟೆಯಿಂದ ಸೋಮವಾರ ರಾತ್ರಿ ೧೦ ಘಂಟೆಯವರೆಗೆ ಜಾರಿಯಲ್ಲಿರಲಿದೆ. ಉಚ್ಚ ನ್ಯಾಯಾಲಯದಲ್ಲಿ ಸದರಿ ವಿಷಯದ ಸಂಬಂಧ ವಿಚಾರಣೆ ನಡೆದು ಸೋಮವಾರ ತೀರ್ಪು ಬರುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.