ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ

Ad Widget ... ..

ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

Ad Widget

ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಹೆಚ್ಚಿನವರಿಗೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಂದು ತಿಳಿದುಬಂದಿದೆ.

ಬಸ್ ನ ಟ್ಯಾಂಕ್ ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ಮಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರು ಹಾಯಿಸಿ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.

Leave a Comment

Your email address will not be published. Required fields are marked *