ಸಮಗ್ರ ನ್ಯೂಸ್ ಡೆಸ್ಕ್: ಕನ್ನಡದ ಹಿರಿಯ ಕವಿ , ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಧಾರವಾಡದ ಎಸ್ ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ .
ಕಣವಿಯವರು ಇನ್ನೂ ಕೂಡ ನಿದ್ರಾಮಂಪರಿನಲ್ಲಿಯೇ ಇದ್ದು, ರಕ್ತದೊತ್ತಡ ಹೆಚ್ಚಾಗಿದೆ ಎಂದು ಎಸ್ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧಾರವಾಡದ ಸತ್ತೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕವಿ ಡಾ.ಚೆನ್ನವೀರ ಕಣವಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಕಳೆದ ಒಂದು ತಿಂಗಳ ಹಿಂದೆ ನ್ಯುಮೋನಿಯಾ ಖಾಯಿಲೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಆರ್‌ಟಿಪಿಸಿಆರ್ ತಪಾಸಣೆಯಿಂದ ಕೋವಿಡ್ ಪಾಸಿಟಿವ್ ಧೃಡಪಟ್ಟಿತ್ತು. ನಂತರ ಕೋವಿಡ್ ನೆಗೆಟಿವ್ ಆಗಿದೆ. ಮುಂದಿನ 3-4 ದಿನಗಳಲ್ಲಿ ನ್ಯಮೋನಿಯಾ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಭರವಸೆಯಿದೆ. ಹಿರಿಯರಾದ ಕಣವಿ ಅವರು ಬಹಳಷ್ಟು ಗಟ್ಟಿತನದಿಂದ ಚಿಕಿತ್ಸೆಗೆ ಸ್ಪಂದಿಸುತ್ತ, ಹೋರಾಟ ನಡೆಸುತ್ತಿದ್ದಾರೆ ಎಂದಿದ್ದಾರೆ.