ಹಿಜಾಬ್ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ| ಸುದೀರ್ಘ ವಾದ-ಪ್ರತಿವಾದದ ನಿರೀಕ್ಷೆ

Ad Widget ... ..

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯಪೀಠ ಮತ್ತೆ ಮುಂದೂಡಿದೆ.

Ad Widget

ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಅವರ ಸುದೀರ್ಘ ವಾದ ಮಂಡನೆ ಆಲಿಸಿದ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಲವು ವಕೀಲರು ವಾದ ಮಂಡನೆಗೆ ಹಕ್ಕು ಮಂಡಿಸಿದ್ದಾರೆ. ಯುವತಿಯ ಎರಡನೇ ಅರ್ಜಿ ಸಂಬಂಧ ಹಿರಿಯ ವಕೀಲ ರವಿವರ್ಮಕುಮಾರ್ ಕೂಡ ವಾದ ಮಂಡಿಸಿದ್ದಾರೆ. ಒಟ್ಟಾರೆ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸುದೀರ್ಘ ವಾದ-ಪ್ರತಿವಾದಗಳು ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದೆ.

Leave a Comment

Your email address will not be published. Required fields are marked *