ಸಮಗ್ರ ನ್ಯೂಸ್ ಡೆಸ್ಕ್: ಈಸ್ಟ್ ಕೋಸ್ಟ್ ರೈಲ್ವೆ ತನ್ನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 756 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಮಾಹಿತಿ ತಿಳಿದುಕೊಳ್ಳಿ.
ಹುದ್ದೆಯ ಮಾಹಿತಿ:
ಕ್ಯಾರಿಯೇಜ್ ರಿಪೇರಿ ವರ್ಕ್ಶಾಪ್, ಮಂಚೇಶ್ವರ್, ಭುವನೇಶ್ವರ್- 190
ಖುರ್ದಾ ರೋಡ್ ಡಿವಿಶನ್- 237
ವಾಲ್ಟೇರ್ ಡಿವಿಶನ್- 263
ಸಂಬಲ್ಪುರ್ ಡಿವಿಶನ್-66
ಒಟ್ಟು 756 ಹುದ್ದೆಗಳು
ವಿದ್ಯಾರ್ಹತೆ:
ಈಸ್ಟ್ ಕೋಸ್ಟ್ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಈಸ್ಟ್ ಕೋಸ್ಟ್ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15-24 ವರ್ಷದೊಳಗಿರಬೇಕು.
ಉದ್ಯೋಗದ ಸ್ಥಳ:
ಈಸ್ಟ್ ಕೋಸ್ಟ್ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಒಡಿಶಾದ ಭುವನೇಶ್ವರದಲ್ಲಿ ಉದ್ಯೋಗ ನೀಡಲಾಗುತ್ತದೆ.
ವೇತನ:
ಈಸ್ಟ್ ಕೋಸ್ಟ್ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಶಾರ್ಟ್ಲಿಸ್ಟಿಂಗ್, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ:
SC/ST/PWD/ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ, ಉಳಿದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/03/2022
ಹೆಚ್ಚಿನ ಮಾಹಿತಿಗಾಗಿ eastcoastrail.indianrailways.gov.in ಗೆ ಭೇಟಿ ನೀಡಬಹುದು.