ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಸಮವಸ್ತ್ರ ವಿವಾದದಲ್ಲಿ ಮುಚ್ಚಲ್ಪಟ್ಟಿದ್ದ ಕಾಲೇಜುಗಳು ಇಂದು ಮತ್ತೆ ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಕಾಲೇಜು ಕ್ಯಾಂಪಸ್ ಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ’ ನೇತೃತ್ವದಲ್ಲಿ ಮಹತ್ವದ ನಡೆದಿದೆ. ಆ ಬಳಿಕ ಮಾತನಾಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, ಬುಧವಾರದಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿವೆ ಎಂದು ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಸೂಚನೆಯಂತೆ ಕಾಲೇಜು ಪ್ರಾರಂಭಿಸಿದ್ದೇವೆ, ಹೈಕೋರ್ಟ್ ಆದೇಶ ಪಾಲಿಸಬೇಕು. ಹಾಗಾಗಿ ಫೆ.16 ರಿಂದ ಪಿಯುಸಿ, ಪದವಿ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಇನ್ನು ವಿದ್ಯಾರ್ಥಿಗಳು ಕೂಡ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರಬೇಕು. ಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಶ್ವ ವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು ಡಿಪ್ಲೋಮೋ ಕಾಲೇಜುಗಳನ್ನು ಪುನರ್ ಫ್ರಾರಂಭಿಸಲು ಶಿಕ್ಷಣ ಇಲಾಖೆ ಸೂಚಿಸಿದೆ. ಈಗಾಗಲೇ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳು ಇಂದಿನಿಂದ ಪುನರಾರಂಭಗೊಳ್ಳಲಿವೆ.