Ad Widget .

ಧಾರವಾಡ: ಹಿರಿಯ ಕವಿ,ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ

Ad Widget . Ad Widget .

ಸಮಗ್ರ ನ್ಯೂಸ್ ಡೆಸ್ಕ್: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತೆ ಆಗಿದೆ.

Ad Widget . Ad Widget .

ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು.

ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್‌ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು.

ಚನ್ನವೀರ ಕಣವಿಯವರು ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928 ರ ಜೂನ್ 28ರಂದು ಜನಿಸಿದರು. ತಂದೆ ಸಕ್ಕರೆಪ್ಪ ಮತ್ತು ತಾಯಿ ಪಾರ್ವತವ್ವ. ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಧಾರವಾಡದಲ್ಲಿಯೆ ಮಾಧ್ಯಮಿಕ ಹಾಗು ಕಾಲೇಜು ಶಿಕ್ಷಣ ಪೂರೈಸಿ ಕಣವಿಯವರು 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದು ಆಗ ತಾನೆ ಆರಂಭವಾಗಿದ್ದ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾಗಿದ್ದರು.

Leave a Comment

Your email address will not be published. Required fields are marked *