Ad Widget .

ಸುಳ್ಯ: ಕಾಲೇಜು ಸಿಬ್ಬಂದಿಯಿಂದ ಪತ್ರಕರ್ತನಿಗೆ ಹಲ್ಲೆ ಯತ್ನ ಪ್ರಕರಣ| ಸ್ಪಷ್ಟನೆ ನೀಡಿದ ಕಾಲೇಜು ಮುಖ್ಯಸ್ಥರು|

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯದ ಖಾಸಗಿ ಕಾಲೇಜೊಂದರಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ್ದನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತರಿಗೆ ಹಲ್ಲೆ ಯತ್ನ ನಡೆದಿದೆ ಎನ್ನಲಾಗಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ಕಾಲೇಜು ಮುಖ್ಯಸ್ಥರು ಸ್ಪಷ್ಟನೆ ನೀಡಿದ್ದಾರೆ.

Ad Widget . Ad Widget .

ಸ್ಥಳೀಯ ಪತ್ರಿಕೆಯೊಂದರ ಪತ್ರಕರ್ತರು ಹಿಜಾಬ್ ಕುರಿತಂತೆ ವರದಿಗೆ ತೆರಳಿದ್ದ ಸಂದರ್ಭದಲ್ಲಿ ಕಾಲೇಜು ಸಿಬ್ಬಂದಿ ಮೊಬೈಲ್ ಕಸಿದು ಹಲ್ಲೆಗೆ ಯತ್ನ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ವರದಿ ಬಿತ್ತರವಾದ ಬೆನ್ನಲ್ಲೇ ಈ ಘಟನೆ ನಡೆದಿಲ್ಲ, ವರದಿಗಳು ಸತ್ಯವಲ್ಲ ಎಂದು ನೆಹರೂ ಮೆಮೋರಿಯಲ್ ಕಾಲೇಜು ಮುಖ್ಯಸ್ಥರು ಸ್ಪಷ್ಟನೆ ನೀಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *