Ad Widget .

ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ| ಮೂವರು ಆರೋಪಿಗಳು ಪೊಲೀಸ್ ವಶಕ್ಕೆ|

ಸಮಗ್ರ ನ್ಯೂಸ್ ಡೆಸ್ಕ್: ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಬಳಿಯ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ಪ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು, ಮತೆ ಮೂವರನ್ನು ಪೊಲೀಸರನ್ನು ಬೆಂಗಳೂರು ಪೊಲೀಸರು ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget .

ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಸಮೀಪದಲ್ಲಿ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Ad Widget . Ad Widget .

ಪೊಲೀಸರು ವಶಕ್ಕೆ ಪಡೆದಿರುವಂತ ಹರ್ಷ ಹತ್ಯೆ ಪ್ರಕರಣದ ಆರೋಪಿ ಎನ್ನಲಾದಂತ ವ್ಯಕ್ತಿಯವನ್ನು ವಿಚಾರಣೆ ನಡೆಸುತ್ತಿದ್ದಾರೆ. ಹರ್ಷ ಕೊಲೆಯ ಪ್ರಕರಣದಲ್ಲಿ ಇನ್ನೂ ನಾಲ್ಕೈದು ಆರೋಪಿಗಳು ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆಯೂ ತನಿಖೆ ಮುಂದುವರೆಸಿದ್ದಾರೆ ಎನ್ನಲಾಗಿತ್ತು.

ಇತ್ತ ಬೆಂಗಳೂರಿನಲ್ಲಿಯೂ ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಂಬಂಧ ಜೆಜೆ ನಗರದಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು, ಶಿವಮೊಗ್ಗ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಬೇಕಿದೆ.

Leave a Comment

Your email address will not be published. Required fields are marked *