ಸುಳ್ಯ: ಇಲಿಪಾಷಾಣ ಸೇವಿಸಿ ವಿದ್ಯಾರ್ಥಿನಿ ಸಾವು| ಆ ಒಂದು ಸಮಸ್ಯೆಯೇ ಸಾವಿಗೆ ಕಾರಣ!

ಸಮಗ್ರ ನ್ಯೂಸ್: ವಿಷ ಸೇವಿಸಿ ವಾರದ ಹಿಂದೆ ತೀವ್ರ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಪಿ.ಯು.ಸಿ. ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.

Ad Widget ... ..

ತಾಲೂಕಿನ ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17 ವ) ಎಂಬಾಕೆಯೆ ಸಾವನ್ನಪ್ಪಿದ ವಿದ್ಯಾರ್ಥಿನಿ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈಕೆ‌ ವಾರದ ಹಿಂದೆ ಮರ್ಕಂಜದ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ಇಲಿಪಾಷಣ ಸೇವಿಸಿದ್ದಳೆಂದು ತಿಳಿದು ಬಂದಿದೆ. ಮನೆಯವರಿಗೆ ವಿಷಯ ತಿಳಿದು ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ನಿನ್ನೆ (ಫೆ.20) ಕೊನೆಯುಸಿರೆಳೆದಳೆಂದು ತಿಳಿದು ಬಂದಿದೆ. ಕಲಿಕೆ ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿರುವುದಾಗಿ ಆಕೆ ಹೇಳಿಕೊಂಡಿರುವುದಾಗಿ ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *