ಮಂಗಳೂರು: ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮೃತ ಹರ್ಷ ವಿರುದ್ದ ಅವಹೇಳನಕಾರಿಯಾದಿ ಬರಹ ಪೋಸ್ಟ್ ಮಾಡಿದ ಮಂಗಳೂರು ಮುಸ್ಲಿಂ ಹೆಸರಿನ ಫೇಸ್ ಬುಕ್ ಪೇಜ್ ವಿರುದ್ದ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬಳಿಕ ಮಂಗಳೂರು ಮುಸ್ಲಿಂ ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ ಕೊಲೆಯಾದವನು ಶಿವಮೊಗ್ಗದ ಬೀದಿ ನಾಯಿ ಎಂದು ಉಲ್ಲೇಖಿಸಿದ್ದು, 2015ರಲ್ಲಿ ಹರ್ಷ ಪ್ರವಾದಿಯನ್ನು ನಿಂದನೆ ಮಾಡಿರುವುದಾಗಿ ಆರೋಪಿಸಲಾಗಿದ್ದು, ಪ್ರವಾದಿ ನಿಂದನೆ ಮಾಡಿದವರನ್ನು ಎಂದಿಗೂ ಬಿಡಲ್ಲ ಎಂದು ಫೇಸ್ ಬುಕ್ ಪೇಜ್ ನಲ್ಲಿ ಎಚ್ಚರಿಕೆ ನೀಡಲಾಗಿದೆ.
ಇದೀಗ ಮಂಗಳೂರು ಮುಸ್ಲಿಂ ಫೇಸ್‌ಬುಕ್ ಪೇಜ್ ಕುರಿತು ತನಿಖೆ ಆರಂಭಿಸಿರುವ ಮಂಗಳೂರು ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.