ಬೆಂಗಳೂರು: ಶಿವೆಮೊಗ್ಗದಲ್ಲಿ ಕೊಲೆಯಾಗಿರುವ ಹಿಂದೂ ಕಾರ್ಯಕರ್ತನನ್ನು ವಿದೇಶಿ ಪತ್ರಕರ್ತನೊಬ್ಬ ಟೆರರಿಸ್ಟ್ aಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟಣೆ ನೀಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಸಿಜೆ ವಾರ್ಲೆನ್ ಎಂಬಾತ ತನ್ನ ಟ್ವಿಟ್ಟರ್ ಖಾತೆಯಲ್ಲಿ, ನವೆಂಬರ್ ತಿಂಗಳಲ್ಲಿ ತ್ರಿಪುರಾದಲ್ಲಿ ಭಯೋತ್ಪಾದಕ ದಾಳಿಯನ್ನು ನಡೆಸಿರುವ ಹಿಂದೂ ಉಗ್ರಗಾಮಿ ಸಂಘಟನೆಯಾಗಿರುವ ಭಜರಂಗದಳಕ್ಕೆ ಸೇರಿದ ಭಯೋತ್ಪಾದಕನನ್ನು ಭಾನುವಾರ ರಾತ್ರಿ ಕೊಲ್ಲಲಾಗಿದೆ ಎಂದು ಬರೆದುಕೊಂಡಿದ್ದನು.
ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರವೀಣ್ ಸೂದ್, ಇದು ಸಂಪೂರ್ಣವಾಗಿ ಸುಳ್ಳು ಸುದ್ದಿಯಾಗಿದೆ. ಹತ್ಯೆಯಾದ ವ್ಯಕ್ತಿಗೆ ಭಯೋತ್ಪಾದನೆ ಅಥವಾ ತ್ರಿಪುರ ಹಿಂಸಾಚಾರದೊಂದಿಗೆ ಯಾವುದೇ ಸಂಬಂಧವಿಲ್ಲ. ಈ ವ್ಯಕ್ತಿಯ ಸಾವಿಗೂ, ಭಯೋತ್ಪಾದನೆಗೂ ಹಾಗೂ ತ್ರಿಪುರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸುವ ಮೂಲಕ ವಾರ್ಲೆನ್ ಆರೋಪವನ್ನು ಡಿಜಿಪಿ ನಿರಾಕರಿಸಿದ್ದಾರೆ.
ಭಾನುವಾರ ರಾತ್ರಿ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸದ್ಯ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಕಫ್ರ್ಯೂ ಜಾರಿ ಮಾಡಲಾಗಿದೆ.
A terrorist belonging to the Hindu extremist group #BajrangDal, which carried out a wave of terrorist attacks against Muslims in Tripura in November, was killed in Karnataka – last night.
— CJ Werleman (@cjwerleman) February 21, 2022
This is absolutely false. There is no connection of death to either terrorism or Tripura. https://t.co/VMv98DRL6H
— DGP KARNATAKA (@DgpKarnataka) February 21, 2022