Ad Widget .

ಬಿಎಸ್ಎನ್ಎಲ್ ನಲ್ಲಿ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಡಿಪ್ಲೋಮಾ ಆದವರು Apply ಮಾಡಿ

Ad Widget . Ad Widget .

ಸಮಗ್ರ ನ್ಯೂಸ್: ಭಾರತ್​ ಸಂಚಾರ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24 ಟೆಕ್ನಿಕಲ್​​ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್​​ 9, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

Ad Widget . Ad Widget .

ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ.
ಹುದ್ದೆಯ ಮಾಹಿತಿ:
ಅಮೃತಸರ- 03
ಚಂಡೀಗರ್-04
ಫಿರೋಜ್​ಪುರ-03
ಹೊಶಿಯಾರ್​ಪುರ್-03
ಜಲಂಧರ್-04
ಲೂಧಿಯಾನ-03
ಪಾಟಿಯಾಲ-04
ಒಟ್ಟು 24 ಹುದ್ದೆಗಳು

ವಿದ್ಯಾರ್ಹತೆ:
ಭಾರತ್​ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಕಲ್​​ ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್​​/ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಡಿಪ್ಲೋಮಾ, ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತ್​ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಕಲ್​​ ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 25 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:
ಭಾರತ್​ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಕಲ್​​ ಅಪ್ರೆಂಟಿಸ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪಂಜಾಬ್​​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ: ಭಾರತ್​ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಕಲ್​​ ಅಪ್ರೆಂಟಿಸ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 8,000 ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/03/2022

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್​ಎನ್​ಎಲ್(BSNL)​ನ ಅಧಿಕೃತ ವೆಬ್​ಸೈಟ್​​ bsnl.co.in ಗೆ ಭೇಟಿ ನೀಡಬಹುದು.

Leave a Comment

Your email address will not be published. Required fields are marked *