ಹಿಜಾಬ್ ತೆಗೆದಿಡಲು ಪ್ರತ್ಯೇಕ ಸ್ಥಳ ಕಲ್ಪಿಸಿ| ಪ.ಪೂ ಇಲಾಖೆಗೆ ಹೈಕೋರ್ಟ್ ಸೂಚನೆ

Ad Widget ... ..

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ಅನುಮತಿ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿಯೇ ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದು, ತರಗತಿಗೆ ಪ್ರವೇಶಿಸಲು ಅನುಕೂಲವಾಗುವಂತೆ, ಪ್ರತ್ಯೇಕ ಸ್ಥಳದಲ್ಲಿ ಹಿಜಾಬ್ ಇರಿಸಲು ವ್ಯವಸ್ಥೆ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.

Ad Widget

ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಹೈಕೋರ್ಟ್ ಮಧ್ಯಂತರ ತೀರ್ಪಿನನ್ವಯ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಅನ್ನು ಧರಿಸಿ ಪ್ರವೇಶಿಸದಂತೆ ಸೂಚಿಸಿದೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ಮಹಿಳಾ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಆವೃತ್ತ ಸ್ಥಳ ಕಲ್ಪಿಸುವಂತೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದ್ದಾರೆ

Leave a Comment

Your email address will not be published. Required fields are marked *