Ad Widget .

ಮಂಗಳೂರು: ಡಾ. ಎಂ.ಎನ್. ರಾಜೇಂದ್ರ ಕುಮಾರ್ ಗೆ ‘ಸಾಧನ‌ಚಕ್ರವರ್ತಿ’ ಪ್ರಶಸ್ತಿ

Ad Widget . Ad Widget .

ಸಮಗ್ರ ನ್ಯೂಸ್: ಐಕಳಬಾವ ಕಾಂತಾಬಾರೆ ಬೂದಾಬಾರೆ ಕುಂಬಳ ಸಮಿತಿ, ಐಕಳ ಮತ್ತು ಮುಂಬಯಿ ವತಿಯಿಂದ ಫೆ. 26ರಂದು ನಡೆಯುವ ಐಕಳ ಕಂಬಳೋತ್ಸವದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅವರಿಗೆ “ಸಾಧನ ಚಕ್ರವರ್ತಿ’ ಪ್ರಶಸ್ತಿ ನೀಡಲಾಗುವುದು ಎಂದು ಕಂಬಳ್ಳೋತ್ಸವ ಸಮಿತಿಯ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಬೆಳಪು ತಿಳಿಸಿದ್ದಾರೆ.

Ad Widget . Ad Widget .

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ 28 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಡಾ| ರಾಜೇಂದ್ರ ಕುಮಾರ್‌ ಬ್ಯಾಂಕನ್ನು “ಜನಸ್ನೇಹಿ’ ಬ್ಯಾಂಕನ್ನಾಗಿ ರೂಪಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವರು. ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್‌ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿ ಸಹ ಕಾರಿ ರಂಗಕ್ಕೆ ಹೊಸ ಆಯಾ ಮವನ್ನು ತಂದು ಕೊಟ್ಟವರು. ಕೋರ್‌ ಬ್ಯಾಂಕಿಂಗ್‌ ನಂತಹ ಉತ್ಕೃಷ್ಟ ತಂತ್ರಜ್ಞಾನವನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಅಳವಡಿಸಿದ್ದಾರೆ. ಸುಸಜ್ಜಿತ ವಾಹನದಲ್ಲಿ ಮೊಬೈಲ್‌ ಬ್ಯಾಂಕ್‌ ಸೇವೆಯನ್ನು ರಾಜ್ಯದ ಸಹಕಾರಿ ರಂಗದಲ್ಲಿ ಮೊದಲ ಬಾರಿಗೆ ಪರಿಚಯಿಸಿದವರು ಅವರು ಎಂದು ಪ್ರಕಟನೆ ತಿಳಿಸಿದೆ.

Leave a Comment

Your email address will not be published. Required fields are marked *