Ad Widget .

ದ.ಕ ಜಿಲ್ಲೆಯಾದ್ಯಂತ ಫೆ. 27ರಿಂದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

Ad Widget . Ad Widget .

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಫೆ. 27ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಮಾಹಿತಿ ನೀಡಿದ್ದಾರೆ.

Ad Widget . Ad Widget .

ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಫೆ.27ರಂದು ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಬೆಳಗ್ಗೆ 8 ಗಂಟೆಗೆ ಅಭಿಯಾನಕ್ಕೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಐದು ವರ್ಷದೊಳಗನ ಪ್ರತಿಯೊಂದು ಮಗುವಿಗೂ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಮತ್ತೆ ಪೋಲಿಯೋ ಹನಿ ಹಾಕಿಸಬೇಕೆಂದು ಮನವಿ ಮಾಡಿದರು. ದ.ಕ. ಜಿಲ್ಲೆಯಲ್ಲಿ ಒಟ್ಟು 921 ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ನೀಡಲಾಗುತ್ತಿದ್ದು, 1,54,023 ಮಕ್ಕಳನ್ನು ಗುರುತಿಸಲಾಗಿದೆ ಎಂದರು.

Leave a Comment

Your email address will not be published. Required fields are marked *