Ad Widget .

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ| ಏ. 10 ರಿಂದ ಬೇಸಿಗೆ ರಜೆ

Ad Widget . Ad Widget .

ಸಮಗ್ರ ನ್ಯೂಸ್: ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಮುಕ್ತಾಯಗೊಳಿಸುವ ಮತ್ತು 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಲಾಗಿದೆ.

Ad Widget . Ad Widget .

2021-22ನೇ ಸಾಲಿನ 1 ರಿಂದ 9ನೇ ತರಗತಿಗಳ ವಾರ್ಷಿಕ ಪರೀಕ್ಷೆ ಮಾರ್ಚ್ 24ರಿಂದ ಆರಂಭಗೊಳ್ಳಲಿದೆ. ಅಲ್ಲದೇ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೇಸಿಗೆ ರಜೆ ಏಪ್ರಿಲ್ 10ರಿಂದ ಆರಂಭವಾಗಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಶೈಕ್ಷಣಿಕ ಚಟುವಟಿಕೆಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಮುಂಬವರು ಶೈಕ್ಷಣಿಕ ವರ್ಷ 2022-23ರಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷ 2021-22 ಅನ್ನು ದಿನಾಂಕ 09-04-2022ಕ್ಕೆ ಮುಕ್ತಾಯಗೊಳಿಸಲಾಗುತ್ತಿದೆ. 2021-22ನೇ ಸಾಲಿನ ಬೇಸಿಗೆ ರಜೆಯನ್ನು ದಿನಾಂಕ 10-04-2022 ರಿಂದ 15-05-2022ರವರೆಗೆ ನೀಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷವನ್ನು ದಿನಾಂಕ 16-05-2022ರಿಂದ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *