Ad Widget .

ಕುಡಿದು ವಾಹನ ಚಲಾಯಿಸಿ ಅಪಘಾತ| ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ|

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತವೆಸಗಿದ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ತಮ್ಮ ಕಾರಿನಿಂದ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದ ಅಪಘಾತ ಪ್ರಕರಣದ ವಿಚಾರಣೆ ವೇಳೆ ಕಾಂಬ್ಳಿ ಪಾನಮತ್ತರಾಗಿರುವುದು ಬೆಳಕಿಗೆ ಬಂದಿದೆ.

Ad Widget . Ad Widget .

ಕುಡಿದು ವಾಹನ ಚಲಾಯಿಸಿದ್ದಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 185 ಅಡಿಯಲ್ಲಿ (ಮೋಟಾರು ಕಾಯ್ದೆ) ಕಾಂಬ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಯ ಬಳಿಕ ಕಾಂಬ್ಳಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.

Ad Widget . Ad Widget .

ಕಾರಿಗೆ ಢಿಕ್ಕಿ ಹೊಡೆದ ಬಳಿಕ ಕಾಂಬ್ಳಿ ಕಾಂಪ್ಲೆಕ್ಸ್‌ನ ಕಾವಲುಗಾರ ಮತ್ತು ಸ್ಥಳೀಯ ನಿವಾಸಿಗಳ ಜತೆಗೂ ಜಗಳವಾಡಿದ್ದರು ಎಂದು ದೂರಲಾಗಿದೆ.

Leave a Comment

Your email address will not be published. Required fields are marked *