ಸಮಗ್ರ ನ್ಯೂಸ್: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಕೊರೊನಾ ಕಾರಣದಿಂದ ಕಳೆದ ಬಾರಿ ಅರ್ಧಕ್ಕೆ ಮೊಟಕುಗೊಂಡ ಮೇಕೆದಾಟು ಪಾದಯಾತ್ರೆಯನ್ನು ಈ ಬಾರಿ ಯಶಸ್ವಿಯಾಗಿ ನಡೆಸಲು ಕಾಂಗ್ರೆಸ್ ಮುಂದಾಗಿದೆ. ಆದರೆ ರಾಮನಗರ ಜಿಲ್ಲೆಯಲ್ಲಿ ಫೆಬ್ರವರಿ 28ರವರೆಗೆ ಜಿಲ್ಲೆಯಾದ್ಯಂತ ಕೊರೊನಾ ಮಾರ್ಗಸೂಚಿ ಪಾಲನೆಗೆ ಮಾರ್ಗಸೂಚಿ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸಾವಿರಾರು ಜನರನ್ನು ಗುಂಪು ಸೇರಿಸಿ ಪಾದಯಾತ್ರೆ ನಡೆಸುತ್ತಿದೆ. ಎಲ್ಲಾ ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿದೆ ಎಂದು ರಾಮನಗರ ತಹಶೀಲ್ದಾರ ವಿಜಯ್ ಕುಮಾರ್‌ರಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ನ 38 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.