Ad Widget .

ಕೋಮು ಸೌಹಾರ್ಧಕ್ಕೆ ಧಕ್ಕೆ| ಚೈತ್ರಾ ಕುಂದಾಪುರ, ಮುತಾಲಿಕ್ ಗೆ ಕಲಬುರಗಿಗೆ ಪ್ರವೇಶ ನಿಷೇಧ|

Ad Widget . Ad Widget .

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ಮುತಾಲಿಕ್, ಚೈತ್ರಾ ಕುಂದಾಪುರ ಅವರನ್ನು ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ರನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ. 27 ರಿಂದ ಮಾ.3ರ ವರೆಗೆ ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.

ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಮಾರ್ಚ್ 1 ರಂದು ಸಂದಲ್ ಮತ್ತು ಶಬ್-ಏ-ಬರಾತ್ ಕಾರ್ಯಕ್ರಮ ಇದ್ದು, ಅದೇ ದಿನ ಮಹಾಶಿವರಾತ್ರಿ ಇರುವುದರಿಂದ ದರ್ಗಾದಲ್ಲಿರುವ ಶಿವಲಿಂಗದ ಶುದ್ಧೀಕರಣ ಕಾರ್ಯಕ್ರಮಕ್ಕೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಕರೆ ನೀಡಿದ್ದಾರೆ. ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಧಕ್ಕೆ ಉಂಟಾಗುವ ಸಾಧ್ಯತೆವಿರುವ ಕಾರಣ ಪ್ರಮೋದ್ ಮುತಾಲಿಕ, ಚೈತ್ರಾ ಅವರನ್ನು ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಮತ್ತು ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಆಳಂದ ತಾಲೂಕು ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕೆಂಬ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆನ್ನಲಾಗಿದೆ.

Leave a Comment

Your email address will not be published. Required fields are marked *