ಕೊಲೆಯಾಗಿರುವ ಹರ್ಷನನ್ನು ಟೆರರಿಸ್ಟ್ ಎಂದು ಬರೆದುಕೊಂಡ ವಿದೇಶಿ ಪತ್ರಕರ್ತ – ಇದಕ್ಕೆ ಡಿಜಿಪಿ ಸ್ಪಷ್ಟನೆ ಡಿಜಿಪಿ
ಬೆಂಗಳೂರು: ಶಿವೆಮೊಗ್ಗದಲ್ಲಿ ಕೊಲೆಯಾಗಿರುವ ಹಿಂದೂ ಕಾರ್ಯಕರ್ತನನ್ನು ವಿದೇಶಿ ಪತ್ರಕರ್ತನೊಬ್ಬ ಟೆರರಿಸ್ಟ್ aಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟಣೆ ನೀಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಸಿಜೆ ವಾರ್ಲೆನ್ ಎಂಬಾತ ತನ್ನ ಟ್ವಿಟ್ಟರ್ ಖಾತೆಯಲ್ಲಿ, ನವೆಂಬರ್ ತಿಂಗಳಲ್ಲಿ ತ್ರಿಪುರಾದಲ್ಲಿ ಭಯೋತ್ಪಾದಕ ದಾಳಿಯನ್ನು ನಡೆಸಿರುವ ಹಿಂದೂ ಉಗ್ರಗಾಮಿ ಸಂಘಟನೆಯಾಗಿರುವ ಭಜರಂಗದಳಕ್ಕೆ ಸೇರಿದ ಭಯೋತ್ಪಾದಕನನ್ನು ಭಾನುವಾರ ರಾತ್ರಿ ಕೊಲ್ಲಲಾಗಿದೆ ಎಂದು ಬರೆದುಕೊಂಡಿದ್ದನು. ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರವೀಣ್ ಸೂದ್, ಇದು ಸಂಪೂರ್ಣವಾಗಿ ಸುಳ್ಳು ಸುದ್ದಿಯಾಗಿದೆ. […]