ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ
ಸುಳ್ಯ: ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾದ ಹಿಜಾಬ್ ವಿವಾದ ಸುಳ್ಯಕ್ಕೂ ಕಾಲಿಟ್ಟಿದ್ದು, ನೆಹರೂ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ವರದಿಯಾಗಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಒಂದುಗೂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ Read More »