February 2022

ಮಂಗಳೂರು: ನಿಗದಿತ ವೇಳೆಯಲ್ಲೇ ಅನಿಲ ಟ್ಯಾಂಕರ್ ಗಳ ಸಂಚಾರ: ನಿಗಾ ವಹಿಸಲು ಡಿಸಿ ಸೂಚನೆ

ಸಮಗ್ರ ನ್ಯೂಸ್ ಡೆಸ್ಕ್: ನಿಗದಿ ಪಡಿಸಿರುವ ವೇಳೆಯಲ್ಲಿಯೇ ಅನಿಲ್ ಟ್ಯಾಂಕರ್ ಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ್ದಾರೆ. ಅವರು ಫೆ.14ರಂದು ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯನ್ನು ಹಾದುಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ. ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು […]

ಮಂಗಳೂರು: ನಿಗದಿತ ವೇಳೆಯಲ್ಲೇ ಅನಿಲ ಟ್ಯಾಂಕರ್ ಗಳ ಸಂಚಾರ: ನಿಗಾ ವಹಿಸಲು ಡಿಸಿ ಸೂಚನೆ Read More »

ದೇವಸ್ಥಾನವನ್ನು ಉಳಿಸಲು ಹಿಂದೂ ಸಮಾಜ ಉಳಿಯಬೇಕು -ಕಲ್ಲಡ್ಕ ಭಟ್

ಸಮಗ್ರ ನ್ಯೂಸ್ ಡೆಸ್ಕ್: ದೇವಸ್ಥಾನವನ್ನು ಉಳಿಸಬೇಕಿದ್ದರೆ, ಹಿಂದು ಸಮಾಜ ಉಳಿಯಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಬಂಟ್ವಾಳದಲ್ಲಿ ನಡೆದ ಕಾರ್ಯಕ್ರವೊಂದರಲ್ಲಿ ಮಾತನಾಡಿದ ಅವರು, ಹಿಂದುಗಳು ನಾವೆಲ್ಲ ಒಂದು ಎಂದರಷ್ಟೇ ಇದು ಸಾಧ್ಯ. ನಾವು ಅಲ್ಪಸಂಖ್ಯಾತರಾದರೆ, ದೇವಸ್ಥಾನವನ್ನು ರಕ್ಷಿಸುವುದು ಯಾರು ಎಂದು ಪ್ರಶ್ನಿಸಿದರು. ಹಿಂದೂ ಸಮಾಜಕ್ಕೆ ಆಕ್ರಮಣಗಳು ಎಲ್ಲ ಕಡೆಯಿಂದ ನಡೆಯುತ್ತಿದೆ. ಅವುಗಳನ್ನು ಎದುರಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು

ದೇವಸ್ಥಾನವನ್ನು ಉಳಿಸಲು ಹಿಂದೂ ಸಮಾಜ ಉಳಿಯಬೇಕು -ಕಲ್ಲಡ್ಕ ಭಟ್ Read More »

SSLC ಪಾಸಾದವರಿಗೆ ಈಸ್ಟ್​ ಕೋಸ್ಟ್​ ರೈಲ್ವೆಯಲ್ಲಿ ಬಂಪರ್ ಉದ್ಯೋಗಾವಕಾಶ

ಸಮಗ್ರ ನ್ಯೂಸ್ ಡೆಸ್ಕ್: ಈಸ್ಟ್​ ಕೋಸ್ಟ್​ ರೈಲ್ವೆ ತನ್ನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 756 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು

SSLC ಪಾಸಾದವರಿಗೆ ಈಸ್ಟ್​ ಕೋಸ್ಟ್​ ರೈಲ್ವೆಯಲ್ಲಿ ಬಂಪರ್ ಉದ್ಯೋಗಾವಕಾಶ Read More »

ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನ

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಲೋಕ ಸೇವಾ ಆಯೋಗವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 33 ಅಸಿಸ್ಟೆಂಟ್ ಪ್ರೊಫೆಸರ್, ಸ್ಟೋರ್ ಆಫೀಸರ್, ಅಸಿಸ್ಟೆಂಟ್ ಮಿನರಲ್ ಎಕನಾಮಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ

ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ಮಾರ್ಚ್​ 3 ಅರ್ಜಿ ಸಲ್ಲಿಸಲು ಕೊನೆಯ ದಿನ Read More »

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ

ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಹೆಚ್ಚಿನವರಿಗೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಂದು ತಿಳಿದುಬಂದಿದೆ. ಬಸ್ ನ ಟ್ಯಾಂಕ್ ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ಮಿ

ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ Read More »

ನಾಯಿಗೆ ಇರುವ ನಿಷ್ಠೆ ಸಿ.ಎಂ.ಇಬ್ರಾಹಿಂಗೆ ಇಲ್ಲ| ಈತ ಬೆಳಗ್ಗೆ ಸಿದ್ದರಾಮಯ್ಯ ಅಂತಾನೆ, ಮಧ್ಯಾಹ್ನ ಯಡಿಯೂರಪ್ಪ ಅಂತಾನೆ| ವಿ.ಎಸ್ ಉಗ್ರಪ್ಪ ವಾಗ್ದಾಳಿ

ಸಮಗ್ರ ನ್ಯೂಸ್ ಡೆಸ್ಕ್: ಸಿ.ಎಂ.ಇಬ್ರಾಹಿಂ ನನ್ನ ಗಂಡಸುತನದ ಬಗ್ಗೆ ಪ್ರಶ್ನಿಸಿದ್ದಾರೆ. ನನ್ನ ಗಂಡಸುತನ ಏನು ಎಂಬುದು ಯಾರಿಗೆ ಗೊತ್ತಿದೆಯೋ ಅವರಿಗೆ ತಿಳಿದಿದೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ, ಸಿ.ಎಂ.ಇಬ್ರಾಹಿಂ ವಿರುದ್ದ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಎಂ.ಇಬ್ರಾಹಿಂ ನನ್ನನ್ನು ನಾಯಿಗೆ ಹೋಲಿಸಿದ್ದಾರೆ. ನಾಯಿಗೆ ಇರುವ ನಿಯತ್ತು, ನಿಷ್ಠೆ ನಿನಗೆ ಇಲ್ಲ. ನಿನಗೆ ಜನ್ಮ ಕೊಟ್ಟಿರುವ ಸಮುದಾಯದ ನಿಷ್ಠೆ ಸಹ ಇಲ್ಲ. ನಿನಗೆ ಪಕ್ಷಕ್ಕಾಗಲಿ, ಧರ್ಮಕ್ಕಾಗಲಿ ನಿಷ್ಠೆ ಇದೆಯಾ ಎಂದು ಉಗ್ರಪ್ಪ ಏಕವಚನದಲ್ಲಿಯೇ ಇಬ್ರಾಹಿಂ ಅವರಿಗೆ

ನಾಯಿಗೆ ಇರುವ ನಿಷ್ಠೆ ಸಿ.ಎಂ.ಇಬ್ರಾಹಿಂಗೆ ಇಲ್ಲ| ಈತ ಬೆಳಗ್ಗೆ ಸಿದ್ದರಾಮಯ್ಯ ಅಂತಾನೆ, ಮಧ್ಯಾಹ್ನ ಯಡಿಯೂರಪ್ಪ ಅಂತಾನೆ| ವಿ.ಎಸ್ ಉಗ್ರಪ್ಪ ವಾಗ್ದಾಳಿ Read More »

ಬುಧವಾರ(ಫೆ.16)ದಿಂದ ಕಾಲೇಜುಗಳು ಮತ್ತೆ ಆರಂಭ – ಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಮುಚ್ಚಲ್ಪಟ್ಟಿದ್ದ ಕಾಲೇಜುಗಳನ್ನು ಬುಧವಾರದಿಂದ ಮತ್ತೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಮುಖ್ಯಮಂತ್ರಿಗಳ ಸಭೆ ಬಳಿಕ ಮಾತನಾಡಿದ ಅವರು ಹೈಕೋರ್ಟ್ ಆದೇಶದಂತೆ ಈಗಿರುವ ವಸ್ತ್ರ ಸಂಹಿತೆ ಆದೇಶ ಕಡ್ಡಾಯಗೊಳಿಸಿ ತರಗತಿಗಳನ್ನು ಪುನರಾರಂಭಗೊಳಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಶಾಲಾ ಕಾಲೇಜುಗಳ ಆವರಣದಲ್ಲಿ ಬಿಗಿ ಭದ್ರತೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಹೈಸ್ಕೂಲ್ ವರೆಗಿನ ತರಗತಿಗಳು ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿವೆ.

ಬುಧವಾರ(ಫೆ.16)ದಿಂದ ಕಾಲೇಜುಗಳು ಮತ್ತೆ ಆರಂಭ – ಸಚಿವ ಆರಗ ಜ್ಞಾನೇಂದ್ರ Read More »

ಸ್ಯಾಂಡಲ್ ವುಡ್ ಹಿರಿಯ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ

ಸಮಗ್ರ ನ್ಯೂಸ್ ಡೆಸ್ಕ್: ಅನಾರೋಗ್ಯದಿಂದ ಬಳಲುತ್ತಿದ್ದ ಚಂದನವನದ ಹಿರಿಯ ನಟಿ ಭಾರ್ಗವಿ ನಾರಾಯಣ್ ಇದೀಗ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಭಾರ್ಗವಿ ನಾರಾಯಣ್ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಭಾರತೀಯ ಚಲನಚಿತ್ರದ ನಟಿ ಮತ್ತು ಕರ್ನಾಟಕದ, ರಂಗಭೂಮಿಯ ಕಲಾವಿದೆ. ಎರಡು ಕನಸು, ಪಲ್ಲವಿ ಅನುಪಲ್ಲವಿ, ಹಾಗೂ ಬಾ ನಲ್ಲೆ ಮಧುಚಂದ್ರಕ್ಕೆ ಸೇರಿದಂತೆ ಹಲವು ಜನಪ್ರಿಯ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಭಾರ್ಗವಿ ನಾರಾಯಣ್ ಪ್ರಸಿದ್ಧ ಟಿವಿ ಧಾರಾವಾಹಿಗಳಾದ ‘ಮಂಥನಾ’ ಮತ್ತು ‘ಮುಕ್ತಾ’ ಸೇರಿದಂತೆ ಕನ್ನಡದ ಅನೇಕ ನಾಟಕಗಳನ್ನು ನಟಿಸಿದ್ದಾರೆ. ಅವರು

ಸ್ಯಾಂಡಲ್ ವುಡ್ ಹಿರಿಯ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ Read More »

ಒಬ್ಬನಿಗೆ ನಾಲ್ಕು ಪತ್ನಿಯರು, 28 ಮಕ್ಕಳು, ಡಿವೈಎಸ್ಪಿಯಿಂದ ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್

ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿಯೋರ್ವ ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಹಾಕಿರುವುದು ಬಹಿರಂಗವಾಗಿದೆ. ಪೋಸ್ಟ್ ನೋಡಿ ಈತನ ಮನಸ್ಥಿತಿ ಈಗಿದ್ದರೆ ಇಲಾಖೆಯಲ್ಲಿ ಎಷ್ಟೆಲ್ಲಾ ಅನ್ಯಾಯ ಮಾಡಿರುವ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ‌. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಡಿವೈಎಸ್ ಪಿ ರಂಗಸ್ವಾಮಿ ಸಿ.ಜೆ, ತನ್ನ ಪೋಸ್ಟ್ ನಲ್ಲಿ ಒಬ್ಬನಿಗೆ ನಾಲ್ಕು ಪತ್ನಿಯರು, 28 ಮಕ್ಕಳು, 5 ಕೆಜಿ X 33 ಒಂದೇ ಮನೆಗೆ 165 ಕೆಜಿ ಉಚಿತ ಪಡಿತರ ಅಕ್ಕಿ. ಹಿಂಗಾದರೆ ಬಹುಬೇಗ ಅವರ ಮುಲ್ಲಾ ಹೇಳಿದ ಹಾಗೆ 2050ರ

ಒಬ್ಬನಿಗೆ ನಾಲ್ಕು ಪತ್ನಿಯರು, 28 ಮಕ್ಕಳು, ಡಿವೈಎಸ್ಪಿಯಿಂದ ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ Read More »

ಮಂಗಳೂರು: ಮಲಗಿದ್ದಲ್ಲೇ 23 ವರ್ಷದ ವಿದ್ಯಾರ್ಥಿ ಸಾವು

ಮಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ವೇಳೆ ನಿದ್ರಿಸುತ್ತಿದ್ದಾಗ ಅಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ , ನಾಗೇಶ್(23) ಎಂದು ಗುರುತಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ಮಂಗಳೂರು: ಮಲಗಿದ್ದಲ್ಲೇ 23 ವರ್ಷದ ವಿದ್ಯಾರ್ಥಿ ಸಾವು Read More »