February 2022

ಮಂಗಳೂರು: ಯುವಕನ ಮೇಲೆ ಮಾರಣಾಂತಿಕ ಹಲ್ಲೆ| ಮನೆ ಬಾಡಿಗೆ ವಿಚಾರದಲ್ಲಿ ನಡುರಾತ್ರಿ ಅಟ್ಟಾಡಿಸಿ ಹೊಡೆದ ದುಷ್ಕರ್ಮಿಗಳು

ಸಮಗ್ರ ಕ್ರೈಂ ಡೆಸ್ಕ್ : ಕೃಷ್ಣಾಪುರದಲ್ಲಿ ಯುವಕನೊಬ್ಬನ ಮೇಲೆ ನಾಲ್ಕರಿಂದ ಐದು ಮಂದಿಯ ಗುಂಪೊಂದು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ರಾತ್ರಿ 12:00 ಗಂಟೆ ಸುಮಾರಿಗೆ ನಡೆದಿದೆ. ಮೊಹಮ್ಮದ್ ಅನಾಸ್ ಎಂಬ 29 ವರ್ಷದ ಯುವಕನ ಮೇಲೆ 4-5 ಮಂದಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ಎಲ್ಲಾ ಆರೋಪಿಗಳನ್ನು ಗುರುತಿಸಲಾಗಿದ್ದು, ಹಲ್ಲೆಗೊಳಗಾದ ಯುವಕ ಮತ್ತು ಹಲ್ಲೆ ನಡೆಸಿದವರು ಒಂದೇ ಸಮುದಾಯದವರಾಗಿದ್ದಾರೆ. ಚಾರು, ರವೂಫ್, ಅಕ್ಕಿ ಮುಸ್ತಫಾ ಮತ್ತು ಇನ್ನೊಬ್ಬ ಹಲ್ಲೆ ನಡೆಸಿದ್ದಾರೆ ಎಂದು […]

ಮಂಗಳೂರು: ಯುವಕನ ಮೇಲೆ ಮಾರಣಾಂತಿಕ ಹಲ್ಲೆ| ಮನೆ ಬಾಡಿಗೆ ವಿಚಾರದಲ್ಲಿ ನಡುರಾತ್ರಿ ಅಟ್ಟಾಡಿಸಿ ಹೊಡೆದ ದುಷ್ಕರ್ಮಿಗಳು Read More »

ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಗೆ ವರ್ಗಾವಣೆ| ನೂತನ ಎಸಿ ಆಗಿ ಗಿರೀಶ್ ನಂದನ್

ಸಮಗ್ರ ನ್ಯೂಸ್ ಡೆಸ್ಕ್: ಪುತ್ತೂರು ಉಪವಿಭಾಗ ಅಧಿಕಾರಿ(ಎಸಿ)ಯಾಗಿದ್ದ ಡಾ| ಯತೀಶ್ ಉಳ್ಳಾಲ್ ಅವರಿಗೆ ವರ್ಗಾವಣೆಯಾಗಿದ್ದು, ಆ ಜಾಗಕ್ಕೆ ಕೆಎಎಸ್ ಅಧಿಕಾರಿ ಗಿರೀಶ್ ನಂದನ್ ನಿಯುಕ್ತಿಗೊಳಿಸಿ ಸರ್ಕಾರ ಆದೇಶಿಸಿದೆ. ಹಾಸನ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಗಿರೀಶ್‌ ನಂದನ್ ಎಂ.ಅವರನ್ನು ಪುತ್ತೂರು ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶಿಸಿದ್ದಾರೆ. ಪುತ್ತೂರು ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ|ಯತೀಶ್ ಉಳ್ಳಾಲ್

ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಗೆ ವರ್ಗಾವಣೆ| ನೂತನ ಎಸಿ ಆಗಿ ಗಿರೀಶ್ ನಂದನ್ Read More »

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ

ಸಮಗ್ರ ನ್ಯೂಸ್ ಡೆಸ್ಕ್: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು 2021 -22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. pue.kar.nic.in ವೆಬ್ಸೈಟ್ ನಲ್ಲಿ ಪ್ರಶ್ನೆಪತ್ರಿಕೆಗಳು ಲಭ್ಯವಿವೆ ಎಂದು ತಿಳಿಸಿದ್ದಾರೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು,

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ Read More »

ಪುತ್ತೂರು: ತಾಲೂಕು ಆಸ್ಪತ್ರೆಯಲ್ಲಿ ಕೈಕೊಟ್ಟ ಡಯಾಲಿಸಿಸ್ ಘಟಕ| ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ| ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ|

ಸಮಗ್ರ ನ್ಯೂಸ್ ಡೆಸ್ಕ್: ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಕೈಕೊಟ್ಟಿರುವ ಡಯಾಲಿಸಿಸ್ ಘಟಕಕ್ಕೆ ಸಂಬಂಧಿಸಿದಂತೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಘಟಕದ ಐದು ಯಂತ್ರಗಳೂ ಕೈಕೊಟ್ಟಿದ್ದು, ಇದರಿಂದ ಕಳೆದ ಕೆಲವು ದಿನಗಳಿಂದ ರೋಗಿಗಳಿಗೆ ಸಮಸ್ಯೆಯಾಗಿತ್ತು. ಡಯಾಲಿಸಿಸ್ ಘಟಕದ ನಿರ್ವಹಣೆಯನ್ನು ಹೊರಗುತ್ತಿಗೆ ನೀಡಲಾಗಿದ್ದು, ಗುತ್ತಿಗೆ ಪಡೆದುಕೊಂಡ ‘ಸಂಜೀವಿನಿ’ ಸಂಸ್ಥೆಯು ಘಟಕದ ನಿರ್ವಹಣೆಯನ್ನು ಮಾಡಿರಲಿಲ್ಲ. ಇದರಿಂದ ಆಸ್ಪತ್ರೆಗೆ ಬರುವ ಬಡರೋಗಿಗಳು ಡಯಾಲಿಸಿಸ್ ಮಾಡಿಕೊಳ್ಳಲಾಗದೇ ತೊಂದರೆ ಅನುಭವಿಸಿದ್ದರು. ಈ

ಪುತ್ತೂರು: ತಾಲೂಕು ಆಸ್ಪತ್ರೆಯಲ್ಲಿ ಕೈಕೊಟ್ಟ ಡಯಾಲಿಸಿಸ್ ಘಟಕ| ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ| ಸಮಸ್ಯೆ ಬಗೆಹರಿಸಲು ತುರ್ತು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ| Read More »

ಠಾಣೆಯೆದರು ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೇ ಕನ್ನ ಹಾಕಿದ ಚಾಣಾಕ್ಷ ಕಳ್ಳ

ಸಮಗ್ರ ನ್ಯೂಸ್ ಡೆಸ್ಕ್: ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸ್ ವಾಹನ ಕಳ್ಳತನವಾಗಿರುವ ಘಟನೆ ಧಾರವಾಡ ಜಿಲ್ಲೆ ಅಣ್ಣಿಗೇರಿ ಪೊಲೀಸ್ ಠಾಣೆ ಎದುರು ನಡೆದಿದೆ. ನಾಗಪ್ಪ ಹಡಪದ ಎಂಬ ವ್ಯಕ್ತಿ ಪೊಲೀಸ್ ವಾಹನ ಎಗರಿಸಿಕೊಂಡು ಪೊಲೀಸ್ ವಾಹನದಲ್ಲಿ ಬ್ಯಾಡಗಿವರೆಗೂ ಹೋಗಿದ್ದಾನೆ. ಸದ್ಯ ಪೊಲೀಸರು ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ವಾಹನ ಪತ್ತೆ ಹಚ್ಚಿ ಆರೋಪಿಯನ್ನು ವಾಪಸ್ ಕರೆದುಕೊಂಡು ಬಂದಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಣ್ಣಿಗೇರಿ ಪಟ್ಟಣದ ಅಂಬಿಕಾ ನಗರ ನಿವಾಸಿ ನಾಗಪ್ಪ ಹಡಪದ ಎಂಬುವವರು ಪೊಲೀಸ್

ಠಾಣೆಯೆದರು ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೇ ಕನ್ನ ಹಾಕಿದ ಚಾಣಾಕ್ಷ ಕಳ್ಳ Read More »

ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ

ಸಮಗ್ರ ನ್ಯೂಸ್ ಡೆಸ್ಕ್: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ. ಈ ಮೂಲಕ ಚೆಂದನವನದ ಹಿರಿಯ ಕಲಾವಿದ ಇನ್ನಿಲ್ಲವಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು.ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದೆ. ಕನ್ನಡ ಸೇರಿದಂತೆ ಹಲವು ಚಿತ್ರಗಳಲ್ಲಿ ತಮ್ಮ ವಿಶಿಷ್ಟ ನಟನೆಯಿಂದ ನಟ ಅಶೋಕ್ ರಾವ್ ಗುರುತಿಸಿಕೊಂಡಿದ್ದರು. ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಅಶೋಕ್ ರಾವ್ ಅಭಿಮಾನಿಗಳ ಮನಗೆದ್ದಿದ್ದರು.

ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ನಿಧನ Read More »

ಸುಳ್ಯ: ಹೊಳೆಯಲ್ಲಿ ಮುಳುಗಿ ಬಾಲಕ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯ ಸಮೀಪದ ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಆಂಧ್ರ ಮೂಲದ ಕುಟುಂಬಸ್ಥರು ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು ಅಲ್ಲೇ ಪರಿಸರದಲ್ಲಿ ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರು. ಇಂದು ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿದ್ದ ಸಂದರ್ಭದಲ್ಲಿ ಸ್ನಾನ ಮಾಡುತ್ತಿದ್ದ ಆರು ವರ್ಷದ ಮಗು ಕುಪ್ಪರಾ ಕಾಣೆಯಾಗಿದ್ದು, ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಅಲ್ಲೇ ಪಕ್ಕದಲ್ಲಿ

ಸುಳ್ಯ: ಹೊಳೆಯಲ್ಲಿ ಮುಳುಗಿ ಬಾಲಕ ಸಾವು Read More »

ಕಡಲೆಕಾಯಿ ‌ಮಾರುತ್ತಾ ‘ಕಾಚಾ ಬಾದಾಮ್’ ಹಾಡು ಸೃಷ್ಟಿಸಿದ ಈತ ಈಗ ಮೀಡಿಯಾ ಟ್ರೆಂಡ್|

ಈ ಸೋಶಿಯಲ್ ಮೀಡಿಯಾಕ್ಕಿಂತ‌ ಪವರ್ ಫುಲ್ ಮೀಡಿಯಾ ಬೇರೆ ಇಲ್ಲ. ಕ್ಷಣಾರ್ಧದಲ್ಲಿ ಒಬ್ಬ ಏನೂ ಅಲ್ಲದ ವ್ಯಕ್ತಿಯನ್ನು ಜಗತ್ತೇ ತಿರುಗಿ‌ ನೋಡುವಂತೆ ಮಾಡುತ್ತದೆ ಅದೇ ರೀತಿ ಫೇಮಸ್ ವ್ಯಕ್ತಿಯನ್ನು ಮಣ್ಣು ಮುಕ್ಕಿಸಿ ಬಿಡುತ್ತದೆ. ಹೌದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಪ್ರತಿ ಗಳಿಗೆಯಲ್ಲಿ ಬೇರೆ ಬೇರೆ ವಿಷಯಗಳು, ಮಾಹಿತಿಗಳು ಬರುತ್ತಲೇ ಇರುತ್ತದೆ.‌ ಅದೇ ರೀತಿ ಅದೆಷ್ಟೋ ಫೋಟೋಗಳು, ವಿಡಿಯೋಗಳು ವೈರಲ್ ಆಗುತ್ತವೆ. ಯಾವುದೇ ಪೂರ್ವಗ್ರಹ ಕಾರಣ ಇಲ್ಲದೆ ಮನೋರಂಜನೆಗಾಗಿ ಮಕ್ಕಳ ಅಥವಾ ದೊಡ್ಡವರ ಚೇಷ್ಠೆಯ ಅದೇ‌ ರೀತಿ ಡ್ಯಾನ್ಸ್

ಕಡಲೆಕಾಯಿ ‌ಮಾರುತ್ತಾ ‘ಕಾಚಾ ಬಾದಾಮ್’ ಹಾಡು ಸೃಷ್ಟಿಸಿದ ಈತ ಈಗ ಮೀಡಿಯಾ ಟ್ರೆಂಡ್| Read More »

ಪಂಜ: ಪಂಚಲಿಂಗೇಶ್ವರನಿಗೆ ಜಾತ್ರಾ ಸಂಭ್ರಮ| ಫೆ.6ರಂದು ಮಹಾ ರಥೋತ್ಸವ

ಸಮಗ್ರ ನ್ಯೂಸ್ ಡೆಸ್ಕ್: ಸುಳ್ಯ ತಾಲೂಕಿನ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಆರಂಭಗೊಂಡಿದೆ. ಫೆ.1 ರಂದು ರಾತ್ರಿ ಧ್ವಜಾರೋಹಣ ನಡೆಯಿತು. ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಬೈಲುಗುತ್ತು , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ, ನಾರಾಯಣ ಗೌಡ ಕೋರ್ಜೆ, ದಿನೇಶ್ ಗರಡಿ,ಶಂಕರ್ ಕುಮಾರ್, ಲಕ್ಷ್ಮಣ ಗೌಡ ಆಕ್ರಿಕಟ್ಟೆ, ರಾಮಚಂದ್ರ

ಪಂಜ: ಪಂಚಲಿಂಗೇಶ್ವರನಿಗೆ ಜಾತ್ರಾ ಸಂಭ್ರಮ| ಫೆ.6ರಂದು ಮಹಾ ರಥೋತ್ಸವ Read More »

ಕುಕ್ಕೆ: ಸೇವಾ ನಿರ್ಬಂಧಗಳಿಗೆ ತೆರವು| ಮಾರ್ಗಸೂಚಿ ಪಾಲನೆಯೊಂದಿಗೆ ಅನುಮತಿ

ಸಮಗ್ರ ನ್ಯೂಸ್ ಡೆಸ್ಕ್: ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿ ಬರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೋವಿಡ್ ಮತ್ತು ಒಮಿಕ್ರಾನ್ ಸೋಂಕು ಹರಡುವ ಹಿನ್ನೆಲೆಯಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಜನವರಿ 6 ರಿಂದ ಕೋವಿಡ್​ ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನದಲ್ಲಿ ಎಲ್ಲಾ ಸೇವೆಗಳನ್ನು ರದ್ದು ಮಾಡಿ, ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ರಾಜ್ಯದಲ್ಲಿ ಇದೀಗ ಸೋಂಕು ತಗ್ಗಿದ ಹಿನ್ನೆಲೆ ನಿರ್ಬಂಧಗಳನ್ನು ರದ್ದು ಮಾಡಿದ್ದು, ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮತ್ತು ಸೇವೆಗಳಿಗೆ

ಕುಕ್ಕೆ: ಸೇವಾ ನಿರ್ಬಂಧಗಳಿಗೆ ತೆರವು| ಮಾರ್ಗಸೂಚಿ ಪಾಲನೆಯೊಂದಿಗೆ ಅನುಮತಿ Read More »