February 2022

ಪುಟಿನ್ ಗೆ ಯುದ್ಧ ನಿಲ್ಲಿಸಲು ಮನವಿ ಮಾಡಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ, ಉಕ್ರೇನ್‌ನಲ್ಲಿ ಇಂದು ಬೆಳಿಗ್ಗೆ ಪ್ರಾರಂಭವಾದ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಮನವಿ ಮಾಡಿದರು ಎಂದು ರಾಷ್ಟ್ರೀಯ ಮಾಧ್ಯಮ ಎನ್.ಡಿ ಟಿವಿ ವರದಿ ಮಾಡಿದೆ. ಮಧ್ಯಸ್ಥಿಕೆಗಾಗಿ ಭಾರತಕ್ಕೆ ಉಕ್ರೇನ್ ತುರ್ತು ಮನವಿ ಮಾಡಿದ ಗಂಟೆಗಳ ನಂತರ ಈ ಸಂಭಾಷಣೆ ನಡೆಯಿತು ಎನ್ನಲಾಗಿದೆ. ರಾಜತಾಂತ್ರಿಕ ಮಾತುಕತೆ ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಸುವ ಕುರಿತು ಪ್ರಧಾನಿ […]

ಪುಟಿನ್ ಗೆ ಯುದ್ಧ ನಿಲ್ಲಿಸಲು ಮನವಿ ಮಾಡಿದ ಪ್ರಧಾನಿ ಮೋದಿ Read More »

ಪ್ರೊ ಕಬಡ್ಡಿ; ಪಾಟ್ನಾ ಪೈರೈಟ್ಸ್-ದಬಂಗ್ ದಿಲ್ಲಿ ನಡುವೆ ಇಂದು ಫೈನಲ್

ಸಮಗ್ರ ನ್ಯೂಸ್: ಕೊರೊನಾದಿಂದಾಗಿ ಎರಡು ವರ್ಷ ಸ್ಥಗಿತಗೊಂಡು, ಈ ಬಾರಿ ಬಯೋಬಬಲ್‌ನಲ್ಲಿ ಯಶಸ್ವಿಯಾಗಿ ನಡೆದ 8ನೇ ಆವೃತ್ತಿ ಪ್ರೊ ಕಬಡ್ಡಿಗೆ ಶುಕ್ರವಾರ ರಾತ್ರಿ ತೆರೆ ಬೀಳಲಿದೆ. ಮೂರು ಬಾರಿಯ ಚಾಂಪಿಯನ್‌ ಪಾಟ್ನಾ ಪೈರೆಟ್ಸ್‌ ಮತ್ತು ಕಳೆದ ಬಾರಿಯ ರನ್ನರ್ ಅಪ್‌ ದಬಾಂಗ್‌ ದಿಲ್ಲಿ ಪ್ರಶಸ್ತಿ ಸಮರದಲ್ಲಿ ಮುಖಾಮುಖಿಯಾಗಲಿವೆ. ಪಾಟ್ನಾ-ದಿಲ್ಲಿ ಲೀಗ್‌ ಹಂತದ ನಂ.1 ಮತ್ತು ನಂ.2 ತಂಡಗಳೆಂಬುದು ವಿಶೇಷ. ಈ ಕಾರಣದಿಂದ ಫೈನಲ್‌ ಹಣಾಹಣಿ ತೀವ್ರ ಪೈಪೋಟಿಯಿಂದ ಕೂಡಿರಲಿದೆ.

ಪ್ರೊ ಕಬಡ್ಡಿ; ಪಾಟ್ನಾ ಪೈರೈಟ್ಸ್-ದಬಂಗ್ ದಿಲ್ಲಿ ನಡುವೆ ಇಂದು ಫೈನಲ್ Read More »

ಬೆಂಗಳೂರು: ಹಸುವಿನ ಮೇಲೆರಗಿದ ಕಾಮುಕ| ವಿಕೃತನಿಗೆ ಬಿತ್ತು ಸಕತ್ ಗೂಸಾ

ಸಮಗ್ರ ನ್ಯೂಸ್: ಗೋವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತ ಕಾಮಿಯನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿ ಸಿದ್ದಾರೆ. ದಾವಣಗೆರೆ ಮೂಲದ ನಿವಾಸಿ ವೆಂಕಟೇಶ್ ಬಂಧಿತ ಆರೋಪಿಯಾಗಿದ್ದು, ಹನುಮಂತಪ್ಪ ಎಂಬುವವರಿಗೆ ಸೇರಿದ ಹಸುವಿನ ಮೇಲೆ ದೌರ್ಜನ್ಯ ಎಸಗಿದ್ದಾನೆ. ಹೈನುಗಾರಿಕೆಯಲ್ಲಿ ತೊಡಗಿರುವ ಹನುಮಂತಪ್ಪನಿಗೆ ನೆರೆಹೊರೆ ಅವರಿಂದ ಈ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಫೆಬ್ರವರಿ 20 ರಂದು ಆ ಕಾಮಿಗಾಗಿ ಕಾದು ಕುಳಿತ್ತಿದ್ದ ಹಸುವಿನ ಮಾಲೀಕ, ಅದೇ ರಾತ್ರಿ ವೇಳೆ ಬಂದ ಕಾಮುಕ ಸಿಕ್ಕಿಬಿದ್ದಿದ್ದಾನೆ. ತಕ್ಷಣವೇ ಸ್ಥಳೀಯರಿಂದ ಆತನಿಗೆ

ಬೆಂಗಳೂರು: ಹಸುವಿನ ಮೇಲೆರಗಿದ ಕಾಮುಕ| ವಿಕೃತನಿಗೆ ಬಿತ್ತು ಸಕತ್ ಗೂಸಾ Read More »

ಸುಳ್ಯ : ಚಂದನ ಸಾಹಿತ್ಯ ವೇದಿಕೆ ವತಿಯಿಂದ ಚಂದನ ಕವಿ ಕಾವ್ಯ ಸಮ್ಮೇಳನ -2022

ಸಾಹಿತಿ,ಜ್ಯೋತಿಷಿ, ಸಂಘಟಕ, ಗಾಯಕ , ನಟ , ಚಿತ್ರ ನಿರ್ದೇಶಕರೂ ಆದ ಎಚ್ ಭೀಮರಾವ್ ವಾಷ್ಠರ್ ಕೋಡಿಹಾಳ ಇವರ 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ಪ್ರಯುಕ್ತ ಚಂದನ ಕವಿ ಕಾವ್ಯ ಸಮ್ಮೇಳನ -2022 ಸಾಹಿತ್ಯ ಸಮಾರಂಭವು ಫೆ20 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಬಹಳ ಅದ್ದೂರಿಯಿಂದ ಅರ್ಥಪೂರ್ಣವಾಗಿ ಜರುಗಿತು. ರಾಜ್ಯ ಮಟ್ಟದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಂದನ ಕವಿಗೋಷ್ಠಿ ಹಾಗೂ ಚಂದನ ಸೌರಭ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯಿತು .

ಸುಳ್ಯ : ಚಂದನ ಸಾಹಿತ್ಯ ವೇದಿಕೆ ವತಿಯಿಂದ ಚಂದನ ಕವಿ ಕಾವ್ಯ ಸಮ್ಮೇಳನ -2022 Read More »

ಬೆಳ್ತಂಗಡಿ: ಮಸೀದಿಗೆ ಬಿಯರ್ ಬಾಟಲ್ ಎಸೆದ ದುಷ್ಕರ್ಮಿಗಳು| ಪೊಲೀಸರಿಂದ ತನಿಖೆ

ಸಮಗ್ರ ನ್ಯೂಸ್ ಡೆಸ್ಕ್ : ದುಷ್ಕರ್ಮಿಗಳ ತಂಡವೊಂದು ಮಸೀದಿಗೆ ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುರ ಜುಮ್ಮಾ ಮಸೀದಿಯಲ್ಲಿ ನಡೆದಿದೆ . ದುಷ್ಕರ್ಮಿಗಳು ಮಸೀದಿಯ ಆವರಣದೊಳಗೆ ಬಿಯರ್ ಬಾಟ್ಲಿ ಎಸೆದಿದ್ದಾರೆ ಆವರಣದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೇ ಬಿಯರ್ ಬಾಟ್ಲಿಗಳು ಬಿದ್ದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಮಸೀದಿಗೆ ಬಿಯರ್ ಬಾಟಲಿ ಎಸೆದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಸೀದಿಯೊಳಗೆ ಬಿಯರ್ ಬಾಟ್ಲಿ ಎಸೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ಮಸೀದಿಗೆ ಬಿಯರ್ ಬಾಟಲ್ ಎಸೆದ ದುಷ್ಕರ್ಮಿಗಳು| ಪೊಲೀಸರಿಂದ ತನಿಖೆ Read More »

ಯಾರದೋ ಬಂಗಾರ ಮತ್ಯಾರಿಗೋ!| ಇದು ಮಣಪ್ಪುರಂ ಗೋಲ್ಡ್ ಲೋನ್ ಸಿಬ್ಬಂದಿಯ ಎಡವಟ್ಟು

ಸಮಗ್ರ ನ್ಯೂಸ್: ಮಣಪ್ಪುರಂ ಗೋಲ್ಡ್ ಲೋನ್ ಸಿಬ್ಬಂದಿಯ ಎಡವಟ್ಟಿನಿಂದ ಯಾರದೋ ಬಂಗಾರ ಮತ್ಯಾರಿಗೋ ಹಸ್ತಾಂತರವಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಜಗದೇವಿ ಮಾಳಿ ಕುಟುಂಬಸ್ಥರು ಇವರು ಕಳೆದ ವರ್ಷ ಮಣಪ್ಪುರಂ ಗೋಲ್ಡ್ ಲೋನ್‍ನಲ್ಲಿ, 37ಗ್ರಾಂ ಬಂಗಾರವನ್ನು ಇಟ್ಟು ಸಾಲ ಪಡೆದಿದ್ದರು. ಪಡೆದ ಸಾಲಕ್ಕೆ ಪ್ರತಿ ತಿಂಗಳು ಸಾಲದ ಕಂತನ್ನು ಸಹ ಪಾವತಿ ಮಾಡುತ್ತಿದ್ದರು. ಆದರೆ ಕಳೆದ ಮೂರು ತಿಂಗಳಿನಿಂದ ಕೆಲಸದ ನಿಮಿತ್ತ ಸೊಲ್ಲಾಪುರ ಹೋಗಿದ್ದ ಈ ಕುಟುಂಬ ಬಡ್ಡಿ ಹಾಗೂ ಸಾಲದ ಪಾವತಿ ಮಾಡಿರಲಿಲ್ಲ. ಈಗ ಹಳೆಯ

ಯಾರದೋ ಬಂಗಾರ ಮತ್ಯಾರಿಗೋ!| ಇದು ಮಣಪ್ಪುರಂ ಗೋಲ್ಡ್ ಲೋನ್ ಸಿಬ್ಬಂದಿಯ ಎಡವಟ್ಟು Read More »

ಮಂಗಳೂರು: ‘ಜಿಲ್ಲೆಯ ಜನರು ಉಕ್ರೇನ್ ನಲ್ಲಿ ಸಿಲುಕಿದ್ದರೆ ಮಾಹಿತಿ ನೀಡಿ’ – ಡಿ.ಸಿ

ಸಮಗ್ರ ನ್ಯೂಸ್ ಡೆಸ್ಕ್: ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದ್ದು, ಈ ನಡುವೆ ಉಕ್ರೇನ್ ನಲ್ಲಿ ಜಿಲ್ಲೆಯ ಜನರು‌ ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೋರಿಕೊಂಡಿದೆ. ಈ ಬಗ್ಗೆ ಯಾರಾದರೂ ನಮ್ಮವರು ಅಲ್ಲಿ ಸಮಸ್ಯೆಗೆ ಸಿಲುಕಿದ್ದ್ರೆ ಮಾಹಿತಿ ನೀಡಿ,ಅಲ್ಲಿ ಇರುವವರು ಹಾಗೂ ಅಲ್ಲಿ ಸಿಲುಕಿಕೊಂಡಿರುವ ಜನರ ಕುಟುಂಬಸ್ಥರು ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ‌ ಕೆ.ವಿ ಮನವಿ ಮಾಡಿಕೊಂಡಿದ್ದಾರೆ. ಉಕ್ರೇನ್​ ಮೇಲೆ ರಷ್ಯಾ ಯುದ್ಧ

ಮಂಗಳೂರು: ‘ಜಿಲ್ಲೆಯ ಜನರು ಉಕ್ರೇನ್ ನಲ್ಲಿ ಸಿಲುಕಿದ್ದರೆ ಮಾಹಿತಿ ನೀಡಿ’ – ಡಿ.ಸಿ Read More »

ಉಕ್ರೇನ್‍ನಲ್ಲಿ ಕರ್ನಾಟಕದ 10. ಮಂದಿ ವಿದ್ಯಾರ್ಥಿಗಳು ಲಾಕ್| ವಿದೇಶಾಂಗ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಸಮಗ್ರ ನ್ಯೂಸ್: ರಷ್ಯಾ ಮತ್ತು ಉಕ್ರೇನ್ ನಡುವೆ ದಾಳಿ ನಡೆಯುತ್ತಿದ್ದು, ಈ ಮಧ್ಯೆ ಕರ್ನಾಟಕದ 10 ಮಂದಿ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉಕ್ರೇನ್ ನಲ್ಲಿ ಬೆಂಗಳೂರು ವಿದ್ಯಾರ್ಥಿ ಲಾಕ್ ಆಗಿದ್ದು, ಪೋಷಕರು ಆತಂಕದಲ್ಲಿ ಇದ್ದಾರೆ. ಪ್ರಸ್ತುತ ದಾಳಿಯಲ್ಲಿ ಸಿಕ್ಕಿ ಹಾಕಿಕೊಂಡಿರುವ ವಿದ್ಯಾರ್ಥಿಗಳ ಪೋಷಕರು ವಾಟ್ಸ್ ಆ್ಯಪ್ ವೀಡಿಯೋ ಕಾಲ್ ಮೂಲಕ ಸಂಪರ್ಕದಲ್ಲಿ ಇದ್ದಾರೆ. ಬೆಳಗ್ಗೆಯಿಂದ ಬಾಂಬ್ ಬ್ಲಾಸ್ಟ್ ಸದ್ದು ಕೇಳಿಬರುತ್ತಿದ್ದು, ನಾವು ಸುರಕ್ಷಿತವಾಗಿರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಪ್ರಸ್ತುತ ಭಾರತಕ್ಕೆ ಬರಲು

ಉಕ್ರೇನ್‍ನಲ್ಲಿ ಕರ್ನಾಟಕದ 10. ಮಂದಿ ವಿದ್ಯಾರ್ಥಿಗಳು ಲಾಕ್| ವಿದೇಶಾಂಗ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚೆ Read More »

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ| ಏ. 10 ರಿಂದ ಬೇಸಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಮುಕ್ತಾಯಗೊಳಿಸುವ ಮತ್ತು 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಲಾಗಿದೆ. 2021-22ನೇ ಸಾಲಿನ 1 ರಿಂದ 9ನೇ ತರಗತಿಗಳ ವಾರ್ಷಿಕ ಪರೀಕ್ಷೆ ಮಾರ್ಚ್ 24ರಿಂದ ಆರಂಭಗೊಳ್ಳಲಿದೆ. ಅಲ್ಲದೇ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಬೇಸಿಗೆ ರಜೆ ಏಪ್ರಿಲ್ 10ರಿಂದ ಆರಂಭವಾಗಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಶೈಕ್ಷಣಿಕ ಚಟುವಟಿಕೆಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ| ಏ. 10 ರಿಂದ ಬೇಸಿಗೆ ರಜೆ Read More »

ವಿಟ್ಲ : ಮಗನನ್ನೇ ಕೊಲೆಗೈದ ತಂದೆ| ಕಾರಣ?

ಸಮಗ್ರ ನ್ಯೂಸ್: ಕುಡಿದು ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಚಂದಳಿಕೆ ಸಮೀಪದ ಕುರುಂಬಳ ಕಾಂತಮೂಲೆಯಲ್ಲಿ ಬುಧವಾರ ನಡೆದಿದೆ. ಮೃತನನ್ನು ದಿನೇಶ್ (45) ಎಂದು ಗುರುತಿಸಲಾಗಿದೆ. ನೀಲಯ್ಯ ಗೌಡ ಮಗನ ಕೊಲೆ ನಡೆಸಿದ ಆರೋಪಿ. ಮೃತರ ತಂದೆ ವಸಂತ ಗೌಡ ಹಾಗೂ ದಿನೇಶ್ ಅವರು ಮನೆಯಲ್ಲಿ ವಾಸವಾಗಿದ್ದು, ದಿನೇಶ್ ಪ್ರತೀ ದಿನ ಮನೆಗೆ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಎಂದು ಹೇಳಲಾಗಿದ್ದು, ಮಗನ ಉಪಟಳ ತಾಳಲಾರದೆ ಅಪ್ಪ ದೊಣೆಯಿಂದ ಹೊಡೆದಿದ್ದಾರೆ. ಮೃತರ

ವಿಟ್ಲ : ಮಗನನ್ನೇ ಕೊಲೆಗೈದ ತಂದೆ| ಕಾರಣ? Read More »