Ad Widget .

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ

Ad Widget . Ad Widget .

ಸಮಗ್ರ ನ್ಯೂಸ್: ಮುಂದಿನ ವರ್ಷದೊಳಗಾಗಿ ದೇಶದಲ್ಲಿ 5ಜಿ ಮೊಬೈಲ್‌ ಸೇವೆ ಆರಂಭಕ್ಕೆ ಅಗತ್ಯವಿರುವ ತರಂಗಾಂತರಗಳ ಹರಾಜನ್ನು ಇದೇ ವರ್ಷ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು.

Ad Widget . Ad Widget .

ನವದೆಹಲಿಯಲ್ಲಿ ನಡೆದ ‘ತಂತ್ರಜ್ಞಾನ ಆಧಾರಿತ ಅಭಿವೃದ್ಧಿ’ ಎಂಬ ವಿಷಯ ಕುರಿತ ವೆಬಿನಾರ್‌ನಲ್ಲಿ ಅವರು ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ.

5ಜಿ ತಂತ್ರಜ್ಞಾನದಿಂದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಾಕಷ್ಟು ವೇಗ ಸಿಗಲಿದೆ. ವೈದ್ಯ ವಿಜ್ಞಾನದಲ್ಲಿಯೂ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದ್ದು, ವೈದ್ಯಕೀಯ ಸಾಧನಗಳ ಉತ್ಪಾದನೆಗೂ ಗಮನ ಹರಿಸಬೇಕು’ ಎಂದು ಹೇಳಿದರು.

‘ಸಮಾಜದ ಕೊನೆಯ ವ್ಯಕ್ತಿಗೂ ವಿವಿಧ ಸೇವೆಗಳನ್ನು ತ್ವರಿತವಾಗಿ ತಲುಪಿಸಲು ಹಾಗೂ ಉದ್ಯೋಗ ಸೃಷ್ಟಿಯಲ್ಲಿ ತಂತ್ರಜ್ಞಾನ ಕ್ಷೇತ್ರ ಮಹತ್ತರ ಪಾತ್ರ ವಹಿಸುತ್ತದೆ. ಹೀಗಾಗಿ ಈ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವುದು ಅಗತ್ಯ’ ಎಂದು ಪ್ರಧಾನಿ ಹೇಳಿದ್ದಾರೆ.

Leave a Comment

Your email address will not be published. Required fields are marked *