ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ| ಪರೀಕ್ಷೆ ದಿನಾಂಕ ಮುಂದೂಡಿದ ಪಿಯು ಬೋರ್ಡ್

Ad Widget ... ..

ಸಮಗ್ರ ನ್ಯೂಸ್. ಕಾಂ : ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಬದಲಾವಣೆಯಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತೊಂದು ಪರೀಕ್ಷಾ ದಿನಾಂಕದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಹಾಗೂ ಜೆಇಇ ಪರೀಕ್ಷೆಯು ಒಟ್ಟಿಗೆ ಬಂದ ಕಾರಣ ಪರೀಕ್ಷೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ.

Ad Widget

ಏಪ್ರಿಲ್ 22 ರಿಂದ ಮೇ 11ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆಕ್ಷೇಪಣೆ ಸಲ್ಲಿಸಲು ಮಾರ್ಚ್ 5ರ ವರೆಗೆ ಅವಕಾಶ ನೀಡಿರೋದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಏಪ್ರಿಲ್ 16 ರಿಂದ ಮೇ 06 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ನಿಗದಿ ಮಾಡಲಾಗಿತ್ತು.

ಹೊಸ ತಾತ್ಕಾಲಿಕ ವೇಳಾಪಟ್ಟಿ ಇಂತಿದೆ:

ಏ. 22 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏ. 23 – ಹಿಂದಿ
ಏ. 25 – ಅರ್ಥಶಾಸ್ತ್ರ
ಏ. 26 – ಹಿಂದೂಸ್ಥಾನಿ ಸಂಗೀತ, ಮನಃಶಾಸ್ತ್ರ, ರಾಸಾಯನ ಶಾಸ್ತ್ರ
ಏ. 27 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏ. 28 – ಕನ್ನಡ, ಅರೇಬಿಕ್
ಏ. 30 – ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಮೇ 2 – ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 4 – ಇಂಗ್ಲಿಷ್
ಮೇ 5 – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮೇ 6 – ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲಗಣಿತ
ಮೇ 7 – ಐಚ್ಚಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
ಮೇ 9 – ಇತಿಹಾಸ, ಭೌತಶಾಸ್ತ್ರ
ಮೇ 11 – ರಾಜ್ಯಶಾಸ್ತ್ರ ಸಂಖ್ಯಾಶಾಸ್ತ್ರ

Leave a Comment

Your email address will not be published. Required fields are marked *