ಸಮಗ್ರ ನ್ಯೂಸ್: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿ ಪರಿಸ್ಥಿತಿ ತಿಳಿಯಾಗತೊಡಗಿದೆ. ಇದೇ ವೇಳೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ.
ಗೋಪಾಳದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಲಾಗಿದೆ. 49 ವರ್ಷದ ವೆಂಕಟೇಶ್ ಹಲ್ಲೆಗೊಳಗಾದವರು. ಗೋಪಾಳದ ಪದ್ಮ ಟಾಕೀಸ್ ಬಳಿ ವೆಂಕಟೇಶ್ ಮೇಲೆ ನಾಲ್ವರು ಯುವಕರು ತಂಡ ದಾಳಿ ಮಾಡಿ, ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದೆ. ತೀವ್ರವಾಗಿ ಗಾಯಗೊಂಡಿರುವ ವೆಂಕಟೇಶ್ ಅವರನ್ನು ಸ್ಥಳೀಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಸ್ಪತ್ರೆಗೆ ಗಣ್ಯರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ್ದು, ತಕ್ಷಣವೇ ಕ್ರಮಕ್ಕೆ ಮುಂದಾಗಿದ್ದಾರೆ. ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರಿಸ್ಥಿತಿ ತಿಳಿಯಾಗುವ ಹೊತ್ತಲ್ಲೇ ಮತ್ತೆ ಇಂತಹ ಘಟನೆ ನಡೆದಿದ್ದು, ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.