ಸಮಗ್ರ ನ್ಯೂಸ್: ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಎದುರಾಗಿರುವ ಆರ್ಥಿಕ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಶುಕ್ರವಾರ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮೇಲೆ ಸಹಜವಾಗಿಯೇ ರಾಜ್ಯದ ಜನತೆಯಲ್ಲಿ ಕುತೂಹಲ ಮೂಡಿಸಿದೆ.
ಮಧ್ಯಾಹ್ನ 12.30ಕ್ಕೆ ಸಿಎಂ ಬೊಮ್ಮಾಯಿಯವರು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯವರೆಗೂ ಅಧಿಕಾರಿಗಳೊಂದಿಗೆ ಕೊನೆಯ ಕ್ಷಣದ ಕಸರತ್ತು ನಡೆಸಿದರು. ಈ ಬಾರಿ ಸಿಎಂ ಬೊಮ್ಮಾಯಿಯವರು ಚಿಕ್ಕದಾದ, ಚೊಕ್ಕವಾದ ಜನಪರ ಬಜೆಟ್ ನೀಡಲು ಮುಂದಾಗಿದ್ದಾರೆ. 2023ರ ಚುನಾವಣೆಯ ದೃಷ್ಟಿಯಿಂದಲೂ ಈ ಬಜೆಟ್ ಕುತೂಹಲ ಮೂಡಿಸಿದೆ.
ಬೊಮ್ಮಾಯಿ ಅವರು, ತಮ್ಮ ಬಜೆಟ್ನಲ್ಲಿ 5 ಕ್ಷೇತ್ರಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ. ಕೃಷಿ, ರೈತರ ಕಲ್ಯಾಣ ಮತ್ತು ನಡೆಯುತ್ತಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಹೆಚ್ಚಿನ ಗಮನಹರಿಸುವ ಸಾಧ್ಯತೆ ಇದೆ.
ಬಜೆಟ್ ಅಧಿವೇಶನದ ನೇರ ಪ್ರಸಾರ ಇಲ್ಲಿ ವೀಕ್ಷಿಸಿ…