ಸಮಗ್ರ ನ್ಯೂಸ್: ಆಗುಂಬೆ ಘಾಟಿಯಲ್ಲಿ ರಸ್ತೆ ದುರಸ್ತಿ ಕಾಮಗಾರಿಯ ಹಿನ್ನಲೆಯಲ್ಲಿ ವಾಹನ ಸಂಚಾರ ನಿಷೇಧಗೊಳಿಸಿರುವುದಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 5ರಿಂದ ಮಾರ್ಚ್ 15ರವರೆಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದ್ದು, ಲಘು ಮತ್ತು ಭಾರಿ ವಾಹನಗಳಿಗೆ ಪ್ರತ್ಯೇಕ ಮಾರ್ಗವನ್ನು ಸೂಚಿಸಲಾಗಿದೆ.
ಆಗುಂಬೆ ಘಾಟಿಯ ತಪಾಸಣಾ ಕೇಂದ್ರದಿಂದ ಹೆಬ್ರಿವರೆಗೆ 5.25 ಕೋಟಿ ರೂ. ವೆಚ್ಚದಲ್ಲಿ 20 ಕಿ.ಮೀ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗುತ್ತಿದೆ. ಸಂಜೆ 7ರಿಂದ ಬೆಳಿಗ್ಗೆ 7ರವರೆಗೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ
ಶಿವಮೊಗ್ಗದಿಂದ ತೀರ್ಥಹಳ್ಳಿ, ಆಗುಂಬೆ, ಉಡುಪಿ. ಮಂಗಳೂರು ಹೆದ್ದಾರಿಯಲ್ಲಿ ಸಂಚರಿಸುವ ಲಘು ವಾಹನಗಳು ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ, ಮಾಳಾ ಘಾಟಿ, ಕಾರ್ಕಳ ಮೂಲಕ ಉಡುಪಿ ತಲುಪಬಹುದು, ಭಾರಿ ವಾಹನಗಳು ಆಯನೂರು, ಆನಂದಪುರ, ಸಾಗರ, ಹೊನ್ನಾವರ ಮೂಲಕ ಸಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದ್ದಾರೆ.