ವಾಯುಭಾರ ಕುಸಿತ; ಎರಡು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

Ad Widget ... ..

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಾಳೆಯಿಂದ ಎರಡು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮದಿಂದಾಗಿ, ಮಾರ್ಚ್ 7 ಹಾಗೂ 8 ರಂದು ರಾಜ್ಯದಲ್ಲಿ ಮಳೆ ಆಗಲಿದೆ.

Ad Widget

ಕಳೆದೆರಡು ತಿಂಗಳಿನಿಂದ ಇದ್ದ ಒಣ ಹವೆ ಕೊನೆಗೊಳ್ಳುತ್ತಿದ್ದು, ಮಾರ್ಚ್ 7ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು ಕೊಡಗು, ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *