Ad Widget .

“ಯುದ್ದ ಆಗುತ್ತೆ ಅಂತ ಗೊತ್ತಿದ್ರೂ ಮೊದಲೇ ಯಾಕೆ ರಕ್ಷಣೆ‌ ಮಾಡಿಲ್ಲ?| ಗಡಿ ದಾಟಿ ಬಂದವರನ್ನು ಕರೆ ತಂದು ಪೋಸ್ ಕೊಡುತ್ತಿದೆ ಸರ್ಕಾರ” – ಯು.ಟಿ‌ ಖಾದರ್ ಆರೋಪ

ಸಮಗ್ರ ನ್ಯೂಸ್: ” ಉಕ್ರೇನ್ ಗಡಿದಾಟಿದ ವಿದ್ಯಾರ್ಥಿಗಳನ್ನು ಕರೆತಂದು ಕೇಂದ್ರ ಸರ್ಕಾರ ರಕ್ಷಣೆ ಮಾಡಿದ ಫೋಸ್ ನೀಡುತ್ತಿದೆ” ಎಂದು ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್ ಆರೋಪಿಸಿದರು.

Ad Widget . Ad Widget .

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಿರ್ಣಯ ಆಗಿರೋದು ರಾತ್ರಿ ಹಗಲಿನ ನಡುವೆ ನಿರ್ಧಾರ ಆಗಿರೋದು ಅಲ್ಲ. ಒಂದು ತಿಂಗಳ ಮೊದಲೇ ಯುದ್ಧ ಆಗುತ್ತದೆ ಅಂತಾ ಗೊತ್ತಿತ್ತು. ಆದರೂ ಭಾರತೀಯ ರಾಯಭಾರಿ ಕಛೇರಿ ಮೊದಲೇ ಮಕ್ಕಳನ್ನು ರಕ್ಷಣೆ ಮಾಡಲಿಲ್ಲ ಏಕೆ?” ಎಂದು ಪ್ರಶ್ನಿಸಿದರು.

Ad Widget . Ad Widget .

“ಉಕ್ರೇನ್ನಿಂದ ವಾಪಸ್ ಬಂದ ವಿದ್ಯಾರ್ಥಿಗಳನ್ನು ಕೇಳಿದರೆ ಅಲ್ಲಿ ಎದುರಿಸಿದ ಕಷ್ಟ ಏನು ಎಂದು ಗೊತ್ತಾಗುತ್ತದೆ. ವಿದ್ಯಾರ್ಥಿಗಳು ಜೀವ ಕೈ ಯಲ್ಲಿ ಹಿಡಿದುಕೊಂಡು ನಡೆದುಕೊಂಡೇ ಗಡಿ ದಾಟಿದ್ದಾರೆ. ಆದರೆ ಸರ್ಕಾರ ಗಡಿ ದಾಟಿದ ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಕರೆತಂದು ರಕ್ಷಣೆ ಮಾಡಿದ ಫೋಸ್ ನೀಡುತ್ತಿದೆ” ಎಂದು ವಾಗ್ದಾಳಿ ನಡೆಸಿದರು.

Leave a Comment

Your email address will not be published. Required fields are marked *