Ad Widget .

ಪ್ಯಾಲೇಸ್ತೀನ್ ನ ಭಾರತೀಯ ಪ್ರತಿನಿಧಿ ಮುಕುಲ್ ರಾಯ್ ಕಚೇರಿಯಲ್ಲಿ ಶವವಾಗಿ ಪತ್ತೆ

Ad Widget . Ad Widget .

ಸಮಗ್ರ ನ್ಯೂಸ್: ರಮಲ್ಲಾದಲ್ಲಿರುವ ಭಾರತದ ಪ್ರತಿನಿಧಿ ಮುಕುಲ್ ಆರ್ಯ ಅವರು ಪ್ಯಾಲೆಸ್ತೀನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ. ಮುಕುಲ್ ಆರ್ಯ ಅವರ ನಿಧನಕ್ಕೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

‘ರಾಮಲ್ಲಾದಲ್ಲಿ ಭಾರತದ ಪ್ರತಿನಿಧಿ ಶ್ರೀ ಮುಕುಲ್ ಆರ್ಯ ಅವರ ನಿಧನದ ಬಗ್ಗೆ ತಿಳಿದು ತೀವ್ರ ಆಘಾತವಾಯಿತು. ಅವರು ಪ್ರತಿಭಾವಂತ ಅಧಿಕಾರಿಯಾಗಿದ್ದರು. ಓಂ ಶಾಂತಿ’ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಭಾರತೀಯ ರಾಯಭಾರಿಯು ರಮಲ್ಲಾದಲ್ಲಿನ ಅವರ ಕೆಲಸದ ಸ್ಥಳದಲ್ಲಿ ನಿಧನರಾದರು ಎಂದು ಪ್ಯಾಲೆಸ್ತೀನ್ ವಿದೇಶಾಂಗ ಸಚಿವಾಲಯ ತಿಳಿಸಿದೆ. ದೇಹವನ್ನು ಭಾರತಕ್ಕೆ ಸಾಗಿಸುವ ವ್ಯವಸ್ಥೆಯನ್ನು ಪೂರ್ಣಗೊಳಿಸಲು ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಸಂಪರ್ಕ ಸ್ಥಾಪಿಸಿದ್ದಾರೆ. ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.

Leave a Comment

Your email address will not be published. Required fields are marked *