Ad Widget .

ಶಿಕ್ಷಕರು ಹೊಡೆಯುತ್ತಾರೆಂದು ಪೊಲೀಸ್ ಗೆ ದೂರು ಕೊಟ್ಟ ಎರಡನೇ ಕ್ಲಾಸ್ ವಿದ್ಯಾರ್ಥಿ

Ad Widget . Ad Widget .

ಸಮಗ್ರ ನ್ಯೂಸ್: ಶಾಲೆಯಲ್ಲಿ ಶಿಕ್ಷಕರು ಹೊಡೆಯುತ್ತಾರೆ ಎಂದು ಎರಡನೇ ಕ್ಲಾಸ್ ಬಾಲಕನೊಬ್ಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ.

Ad Widget . Ad Widget .

2ನೇ ತರಗತಿ ವಿದ್ಯಾರ್ಥಿ ಅನಿಲ್ ನಾಯ್ಕ್, ಮೆಹಬೂಬ್ ನಗರದ ಖಾಸಗಿ ಶಾಲಾ ಶಿಕ್ಷಕನ ವಿರುದ್ಧ ದೂರು ನೀಡಿದ್ದು, ಈ ವೇಳೆ ಮಹಿಳಾ ಇನ್ಸ್ ಪೆಕ್ಟರ್ ರಮಾದೇವಿ ವಿದ್ಯಾರ್ಥಿಯನ್ನು ವಿಚಾರಿಸಿದ್ದಾರೆ.

ಈ ವೇಳೆ ವಿದ್ಯಾರ್ಥಿ ನನಗೆ ಶಿಕ್ಷಕರು ಶಾಲೆಯಲ್ಲಿ ಹೊಡೆಯುತ್ತಿದ್ದಾರೆ. ಅವರನ್ನು ಬಂಧಿಸುವಂತೆ ಹೇಳಿದ್ದಾನೆ.

ಬಳಿಕ ಇನ್ಸ್ ಪೆಕ್ಟರ್ ರಮಾದೇವಿ, ವಿದ್ಯಾರ್ಥಿಯ ಜತೆ ಶಾಲೆಗೆ ತೆರಳಿ ಶಿಕ್ಷಕರನ್ನು ವಿಚಾರಿಸಿದ್ದಾರೆ. ಶಿಕ್ಷಕ ಹಾಗೂ ವಿದ್ಯಾರ್ಥಿ ಇಬ್ಬರಿಗೂ ಕೌನ್ಸೆಲಿಂಗ್ ಮಾಡಿ ಮನವೊಲಿಸಲಾಗಿದೆ.

Leave a Comment

Your email address will not be published. Required fields are marked *